8:55 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಜಿಡಿಪಿಯಲ್ಲಿ ರಾಜ್ಯದಲ್ಲೇ ಮಂಗಳೂರಿಗೆ 2ನೇ ಸ್ಥಾನ: ಸಂಸದ ನಳಿನ್ ಕುಮಾರ್ ಕಟೀಲ್ ಹರ್ಷ

22/12/2022, 20:41

ಮಂಗಳೂರು(reporterkarnataka.com): ಆರ್ಥಿಕ ಪ್ರಗತಿಯ ಅಳತೆಗೋಲಾದ ಒಟ್ಟು ದೇಶಿಯ ಉತ್ಪಾದನೆ (ಜಿಡಿಪಿ)ಯಲ್ಲಿ ರಾಜ್ಯದಲ್ಲಿಯೇ ಮಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹರ್ಷ ವ್ಯಕ್ತಪಡಿಸಿದರು.

ಅವರು ಗುರುವಾರ ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ 3ನೇ ತ್ರೈಮಾಸಿಕ ಪರಿಶೀಲನಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಾಣಿಜ್ಯ ಚಟುವಟಿಕೆಗಳು ಹೆಚ್ಚಿರುವ ಹುಬ್ಬಳ್ಳಿ ಅಥವಾ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಮೈಸೂರಿಗಿಂತಲೂ ಜಿಡಿಪಿಯಲ್ಲಿ ಮಂಗಳೂರು ಎರಡನೇ ಸ್ಥಾನದಲ್ಲಿರುವುದಕ್ಕೆ ನಾಗರೀಕರು, ಉದ್ದಿಮೇದಾರರು, ಬ್ಯಾಂಕರುಗಳು, ಛೆಂಬರ್ ಆಫ್ ಕಾಮರ್ಸ್ನವರು ಕಾರಣರಾಗಿದ್ದಾರೆ ಎಂದರು.

ಬ್ಯಾಂಕುಗಳ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿಗದಿತ ಗುರಿ ತಲುಪದ ಬ್ಯಾಂಕುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಆ ಬ್ಯಾಂಕುಗಳಲ್ಲಿ ಸರ್ಕಾರದ ಹಣವಿದ್ದಲ್ಲೀ ಕೂಡಲೇ ಅದನ್ನು ತೆಗೆದು ಇತರೆ ಬ್ಯಾಂಕುಗಳಲ್ಲಿ ಇರಿಸುವಂತೆ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಮಾತನಾಡಿ, ತಲಾ ಆದಾಯ (ಪರ್ ಕ್ಯಾಪಿಟಲ್ ಇನ್‌ಕಮ್)ದಲ್ಲೂ ಮಂಗಳೂರು ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದಿದೆ, ಕೈಗಾರಿಕೆಗಳು, ಉದ್ದಿಮೆಗಳು, ಹತ್ತು ಹಲವಾರು ವಾಣಿಜ್ಯ ಚಟುವಟಿಕೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಇದು ಸಾಧ್ಯವಾಗಿದೆ, ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಬ್ಯಾಂರ‍್ಸ್ಗಳಿಗೆ ಅಭಿನಂದನೆ ಸಲ್ಲಬೇಕೆಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾದ ಎಜಿಎಂ ಪಿ. ಬಿಸ್ವಾಸ್, ನಬಾರ್ಡ್ ಡಿಡಿಎಂ ಸಂಗೀತಾ ಎಸ್. ಕರ್ತ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಎಂ.ಪಿ. ವೇದಿಕೆಯಲ್ಲಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಸಿದ್ದಪಡಿಸಲಾಗದ ಸರ್ಕಾರಿ ಸೌಲಭ್ಯಗಳ ಮಾಹಿತಿಯುಳ್ಳ ಗ್ಲಿಂಪ್ಸ್ ಆಫ್ ಗೌರ್ವಮೆಂಟ್ ಸ್ಪಾನರ್ಸಡ್ ಸ್ಕಿಮ್ಸ್ ಎಂಬ ಹೊತ್ತಿಗೆಯನ್ನು ಸಂಸದರು ಬಿಡುಗಡೆ ಮಾಡಿದರು.

ಇದೇ ವೇಳೆ ನಬಾರ್ಡ್ನ 2023-24ನೇ ಸಾಲಿನ ಪೋಟೆಷಿಯಲ್ ಲಿಂಕ್ಡ್ ಕ್ರಡಿಟ್ ಪ್ಲಾನ್ (ಪಿಎಲ್‌ಪಿ) ಪುಸ್ತಕವನ್ನು ಅನಾವರಣಗೊಳಿಸಲಾಯಿತು.
ಪಿಎಂಇಜಿಪಿ (ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ) ಯೋಜನೆಯ ಅನುಷ್ಠಾನದಲ್ಲಿ 2021-22ನೇ ಸಾಲಿನಲ್ಲಿ ಜಿಲ್ಲೆ ರಾಜ್ಯದಲ್ಲಿ ತೃತೀಯ ಸ್ಥಾನ ಪಡೆದಿದೆ, ಆ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಲ ನೀಡಿದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಮುಖರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು