3:37 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಜಾತ್ರೆಗೆ ಬಂದ ಯುವಕರ ಮೇಲೆ ಚೂರಿ ದಾಳಿ: ಓರ್ವ ಸಾವು; ಇನ್ನೊಬ್ಬ ಗಂಭೀರ ಗಾಯ

23/12/2022, 11:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ಆಗಮಿಸಿದ್ದ ಇಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆಗೈದಿದ್ದರಿಂದ ಓರ್ವ ಸಾವಿಗೀಡಾಗಿ, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ.

ಅಥಣಿ ಪಟ್ಟಣದವರಾದ ಗಣೇಶ ಪಂಡಿತ ಸಿಕ್ಕಲಗಾರ (23) ಮೃತನಾಗಿದ್ದು, ನರೇಂದ್ರ ಸಂಜಯ ಘಟಕಾಂಬಳೆ (32) ಗಂಭೀರ ಗಾಯಗೊಂಡಿದ್ದಾರೆ. ಗ್ರಾಮದ ಪಾಟಣಕರ ಗದ್ದೆಯ ಬಸ್‌ ನಿಲ್ದಾಣದ ಹಿಂದುಗಡೆ ಘಟನೆ ಜರುಗಿದೆ. ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡ ಗಣೇಶ ಹಾಗೂ ನರೇಂದ್ರ ಚೀರಾಡುತ್ತಾ ಗದ್ದೆಯಲ್ಲಿ ಬಿದ್ದಿರುವ ಸಪ್ಪಳ ಕೇಳಿಸಿಕೊಂಡ, ಅಲ್ಲಿನ ನಿವಾಸಿಗಳು ಆಂಬುಲೆನ್ಸ್ ವಾಹನಕ್ಕೆ ಕರೆ ಮಾಡಿದ್ದಾರೆ. ನಂತರ ಕೊಕಟನೂರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಅಲ್ಲಿಂದ ಕರೆದೊಯ್ದು ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗಲೇ ಗಣೇಶ ಸಿಕ್ಕಲಗಾರ ಸಾವಿಗೀಡಾಗಿದ್ದಾನೆ. ಗಾಯಗೊಂಡ ನರೇಂದ್ರನನ್ನು ಅಥಣಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಕುರಿತು ಐಗಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಮಹಾನಿಂಗ ನಂದಗಾಂವಿ, ಅಥಣಿ ಡಿವೈಎಸ್‌ಪಿ ಶ್ರೀಪಾದ ಜಲ್ಲೆ, ಸಿಪಿಐ ರವೀಂದ್ರ ನಾಯ್ಕಡಿ, ಪಿಎಸ್‌ಐಗಳಾದ ಶಿವರಾಜ ಧರಿಗೋಣ, ಶಿವಾಜಿ ಪವಾರ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು