12:35 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಗ್ರಾಮೀಣ ಜನರ ಆರೋಗ್ಯದ ಹಿತದೃಷ್ಟಿಯಿಂದ ಕಡಿಮೆ ವೆಚ್ಚದಲ್ಲಿ ಆಧುನಿಕ ಆರೋಗ್ಯ ಸೌಲಭ್ಯ: ಡಾ.ಎಂ.ಎಂ. ಶೇಖರ್

23/12/2022, 19:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info. reporterkarnataka@gmail.com

ಗ್ರಾಮಾಂತರ ಪ್ರದೇಶದಲ್ಲಿ ಬಡ ಜನರ ಆಶಾಕಿರಣವಾಗಿರುವ ಶ್ರೀ ಆದಿಚುಂಚನಗಿರಿ ಸೂಪರ್ ಹಾಸ್ಪಿಟಲ್ ನಲ್ಲಿ ವಿವಿಧ ಸೌಲಭ್ಯಗಳು ದೊರೆಯಲಿವೆ ಎಂದು ವೈದ್ಯಕೀಯ ಮಹಾವಿದ್ಯಾಲಯದ ಕುಲಪತಿ ಡಾ. ಎಂ. ಎಂ. ಶೇಖರ್ ಹೇಳಿದರು.

ಅವರು ನಾಗಮಂಗಲ ತಾಲೂಕು ಬಿಜಿ ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಶ್ರೀ ಆದಿಚುಂಚನಗಿರಿ ಸೂಪರ್ ಸ್ಪೆಶಾಲಿಟಿ ಹಾಸ್ಪಿಟಲ್ ಮೇಲ್ದರ್ಜೆಗೆಯಾಗಿದ್ದು ಈ ಆಸ್ಪತ್ರೆಯಲ್ಲಿನ ವಿವಿಧ ವಿಭಾಗಗಳಲ್ಲಿ ಬಡಜನರು ನಗರಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಕಡಿಮೆ ವೆಚ್ಚದಲ್ಲಿ ಅನುಕೂಲವಾಗುವ ತಪಾಸಣಾ ಸೇವೆಗಳು ಲಭ್ಯವಿದ್ದು, ಶ್ರೀಗಳ ಬಹುದಿನದ ಕನಸು ನನಸಾಗಿರುವುದು ನಿಜಕ್ಕೂ ಸಂತೋಷವಾಗಿದೆ ಎಂದು ಹೇಳಿದರು.

ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರು ಸದುಪಯೋಗಪಡಿಸಿ ಪಡೆಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಡಾ. ಸಿ. ಕೆ. ಸುಬ್ಬ (ಕುಲ ಸಚಿವರು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ) ಡಾ. ಎಂ. ಜೆ. ಶಿವರಾಂ (ಪ್ರಾಚಾರ್ಯರು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ) ಡಾ. ಕೆ. ಎಂ. ಶಿವಕುಮಾರ್ (ಮುಖ್ಯಸ್ಥರು ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ) ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿನ ವಿವಿಧ ವಿಭಾಗದ ಆರೋಗ್ಯ ತಪಾಸಣಾ ಕೇಂದ್ರಗಳ ಬಗ್ಗೆ ವಿವರವಾದ ಮಾಹಿತಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು