ಇತ್ತೀಚಿನ ಸುದ್ದಿ
ರಾಜ್ಯ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
24/12/2022, 18:27

ಹುಬ್ಬಳ್ಳಿ(reporter Karnataka.com): ರಾಜ್ಯ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮಸರಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಕಾಂಗ್ರೆಸ್ ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗಿ ಅಭದ್ರತೆ ಕಾಡುತ್ತಿದೆ. ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿರುವ ಸಂದೇಶ ಎಂದು ಅವರು ನುಡಿದರು.