9:03 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಬಾವಾ ವಿರುದ್ಧ 3 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

24/12/2022, 22:28

ಸುರತ್ಕಲ್(reporterkarnataka.com): ಸುರತ್ಕಲ್ ಮಾರುಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ತನ್ನ ವಿರುದ್ಧ 38 ಕೋಟಿ ರೂ. ಕಮಿಷನ್ ಪಡೆದ ಆರೋಪ ಮಾಡಿದ್ದಾರೆ. ಮಾಜಿ ಶಾಸಕರು ಆ ಕುರಿತು ಸರಿಯಾದ ದಾಖಲೆ ಕೊಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಇಲ್ಲಿ ಮಾಧ್ಯಮ ಜತೆ ಮಾತನಾಡಿದ ಶಾಸಕರು, ಮಾಜಿ ಶಾಸಕರಿಗೆ ತಾನು ಲಾಯರ್ ನೋಟಿಸ್ ಕಳುಹಿಸುತ್ತೇನೆ. ಅವರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದರು.
ಸದನದಲ್ಲಿ ತಾನು ಪ್ರಶ್ನೆ ಕೇಳಿದಾಗ ಸಚಿವರು ಉತ್ತರ ನೀಡಿದ್ದಾರೆ. ಆ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಉಪ ನಾಯಕ ಯು.ಟಿ. ಖಾದರ್ ಹಾಜರಿದ್ದರು. ಸದನದಲ್ಲಿ ಸುಳ್ಳು ಹೇಳಲು ಸಾಧ್ಯವಿಲ್ಲ. ಸಚಿವರು ಎಲ್ಲವನ್ನು ಪರಿಶೀಲಿಸಿ ಉತ್ತರ ನೀಡಿದ್ದಾರೆ ಎಂದು ಡಾ. ಭರತ್ ಶೆಟ್ಟಿ ನುಡಿದರು.

ಸುರತ್ಕಲ್ ಮಾರುಕಟ್ಟೆಗೆ ಸಂಬಂಧಿಸಿದ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸದೆ ವಿಳಂಬವಾಗಿದೆ. ಜಿಎಸ್ ಟಿ ಸೇರಿಸಿಲ್ಲ. ಎಸ್ ಆರ್ ರೇಟ್ ಜಾಸ್ತಿಯಾಗಿದೆ. ಅದನ್ನು ಸರಿಪಡಿಸಲು ಗುತ್ತಿಗೆದಾರರು ಒತ್ತಾಯಿಸಿದ್ದಾರೆ. ಇದನ್ನೆಲ್ಲ ಸೇರಿಸಿ ಹೊಸ ಟೆಂಡರ್ ಕರೆಯಬೇಕು. ಗುತ್ತಿಗೆದಾರರ ಹಳೆ ಬಿಲ್ ನ್ನು ಸರಕಾರ ಪಾವತಿಸಿದೆ ಎಂದು ಶಾಸಕರು ವಿವರಿಸಿದರರು.
ಮಂಗಳೂರು ಉತ್ತರ ಕ್ಷೇತ್ರ ಈಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ರಸ್ತೆ, ತಡೆಗೋಡೆ ಸೇರಿದಂತೆ ಎಲ್ಲ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದನ್ನು ಸಹಿಸಲಾಗದೆ ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಶಾಸಕ ಬಾವಾ ಅವರು ಮಾತನಾಡುವ ಭರದಲ್ಲಿ ಏನೋ ಹೇಳಿದ್ದಾರೆ ಎಂದು ಸುಮ್ಮನಿರಲು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು