3:30 AM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು

24/12/2022, 23:23

ರಾಹುಲ್ ಅಥಣಿ ಬೆಳಗಾವಿgg

info.reporterkarnataka@gmail.ಕಾಂ

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು.
ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ಕುಂಡಕ್ಕೆ ವಿಶೇಷ ಪೂಜೆ, ಅಭಿಷೇಕ, ಹೋಮ-ಹವನ ವಿಧಿ ವಿಧಾನ ಪೂರ್ವಕವಾಗಿ ನೆರವೇರಿಸಲಾಯಿತು.ದೇವಿ ದರ್ಶನ ಪಡೆದ ಭಕ್ತರು ಪಂಚ ಪದಾರ್ಥಗಳಾದ ಉಡಿ ತುಂಬಿ, ಗಜ್ಜರಿ, ತಪ್ಪಲ ಈರುಳ್ಳಿ, ಬದನೆಕಾಯಿ, ಮೆಂತೆ, ಬಾಳಿಕಾಯಿ ಸೇರಿದಂತೆ ಕಡಬು, ಹೋಳಿಗೆಯನ್ನು ಹಡಲಗಿ ಬುಟ್ಟಿಯಲ್ಲಿಟ್ಟು ಕುಂಕುಮ ಅರಿಶಿಣ ಹಚ್ಚಿ ಭಕ್ತಿ-ಭಾವದಿಂದ ನೈವೇದ್ಯ ಅರ್ಪಿಸಿದರು.


ಮುತ್ತೈದೆತನ ಗಟ್ಟಿಯಾಗಲೆಂದು ದೇವಸ್ಥಾನದಲ್ಲಿ ಬಳೆ ಉಡಿಸಲಾಯಿತು. ಮದುವೆ ಮಾಡಿ ಕೊಟ್ಟ ಹೆಣ್ಣು ಮಕ್ಕಳನ್ನು ತವರು ಮನೆಗೆ ಕರೆಯಿಸಿ ಅವರಿಗೆ ಉಡಿ ತುಂಬಿ ಕಳುಹಿಸಲಾಯಿತು. ಜಾತ್ರಾ ಕಮಿಟಿ ಅಧ್ಯಕ್ಷ ಬಾಬುಗೌಡ ಬುಲಗೌಡ ಮಾತನಾಡಿ, 2 ವರ್ಷದಿಂದ ಕರೋನಾ ಹಿನ್ನೆಲೆಯಲ್ಲಿ ಜಾತ್ರೆ ಸಂಭ್ರಮದಿಂದ ಮಾಡಲು ಸಾಧ್ಯವಾಗಿರಲಿಲ್ಲ. ಕಾರಣ, ಈ ಬಾರಿ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಜಾತ್ರೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು