6:27 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಕಾಟಿಪಳ್ಳ ಕೊಲೆ ಪ್ರಕರಣ: ಕಮಿಷನರೇಟ್ ವ್ಯಾಪ್ತಿಯ 4 ಪೊಲೀಸ್ ಠಾಣೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ

25/12/2022, 11:54

ಮಂಗಳೂರು(reporter Karnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ಡಿ. 27, ಬೆಳಿಗ್ಗೆ 6 ಗಂಟೆಯವರಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಈ ವಿಷಯ ತಿಳಿಸಿದ್ದಾರೆ.
ಸುರತ್ಕಲ್‌ನ ಕಾಟಿಪಳ್ಳ 4 ನೇ ಬ್ಲಾಕ್‌ನಲ್ಲಿ ಶನಿವಾರ
ದುಷ್ಕರ್ಮಿಗಳು ಜಲೀಲ್(43) ಎಂಬವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. ಹಿನ್ನೆಲೆಯಲ್ಲಿ ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಶಶಿಕುಮಾರ್
ತಿಳಿಸಿದ್ದಾರೆ.
ಐದು ಮಂದಿ ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆ, ಸಾರ್ವಜನಿಕ ಸಭೆಗಳನ್ನು ನಡೆಸುವುದು, ಜಾಥಾ, ಮೆರವಣಿಗೆಗಳು ಮತ್ತು ಬಂದೂಕು, ಸ್ಫೋಟಕ, ಪಟಾಕಿಗಳನ್ನು ಸಾಗಿಸುವುದಕ್ಕೆ ಈ ಅವಧಿಯಲ್ಲಿ ನಿಷೇಧ ಹೇರಲಾಗಿದೆ. ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದು ಮತ್ತು ಜನರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ನಡೆಸುವಂತೆ ಇಲ್ಲ ಎಂದು ತಿಳಿಸಿದ್ದಾರೆ.
ಉದ್ವಿಗ್ನ ಪರಿಸ್ಥಿತಿಯನ್ನು ಕಿಡಿಗೇಡಿಗಳು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುವುದರಿಂದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಕಾರ್ಖಾನೆಗಳು ಮತ್ತು ಸಂಸ್ಥೆಗಳು ಭಾನುವಾರ, ಸೋಮವಾರ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಸಿಬ್ಬಂದಿಗಳ ಕೆಲಸದ ಸಮಯವನ್ನು ಬದಲಾಯಿಸಿಕೊಳ್ಳಬೇಕು. ಈ ಪ್ರದೇಶಗಳಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಯಾವುದೇ ಕಾರ್ಮಿಕರು ರಸ್ತೆಗಳಲ್ಲಿ ಸಂಚರಿಸದಂತೆ ಕ್ರಮ ವಹಿಸಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ಆದೇಶಿಸಿದ್ದಾರೆ
ಮದ್ಯ ಮಾರಾಟ ನಿಷೇಧ: ಡಿ. 27 ರ ಬೆಳಿಗ್ಗೆ 10 ಗಂಟೆಯವರಿಗೆ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹಾಕಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‌ಆರ್‌ಪಿ ತುಕಡಿಗಳು, ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು