1:45 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ

25/12/2022, 20:57

ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟಕರ. ಇಂತಹ ಘಟನೆ ನಡೆಯಬಾರದಿತ್ತು. ಜನರು ಯಾವುದೇ ಊಹಾಪೋಹಕ್ಕೆ ಕಿವಿಗೊಡದೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿದರು.
ಕಾಟಿಪಳ್ಳ ಕೊಲೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ‌. ಆದಷ್ಟು ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ತನಿಖೆ ನಡೆಯಲಿದೆ ಎಂದು ಅವರು ನುಡಿದರು.
ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ

ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲು ನಾನು ಆಗಮಿಸಿದ್ದೇನೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಕ್ಜಳಲ್ಲಿ ಶಿಸ್ತು, ದೇಶಪ್ರೇಮ ಮೂಡಿಸುವಲ್ಲಿ ಬಹಳ ಅಗತ್ಯ. ರಾಜ್ಯದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉತ್ತಮ ಕೆಲಸ ಮಾಡುತ್ತಿದೆ. ಹಾಗಾಗಿ ಅಧಿವೇಶನ ನಡೆಯುತ್ತಿದ್ದರೂ ಪೂರ್ವ ನಿಗದಿತ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ ಎಂದು ಸಿಎಂ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು