10:04 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂದಿನಿಂದ ಅನ್ ಲಾಕ್ 3.0 ಜಾರಿ: ದೇಗುಲ, ಮಾಲ್ ಗೆ ಗ್ರೀನ್ ಸಿಗ್ನಲ್ ; ನೈಟ್ ಕರ್ಫ್ಯೂ ಮುಂದುವರಿಕೆ

05/07/2021, 07:16

ಬೆಂಗಳೂರು(reporterkarnataka news): ಸರಕಾರದ ಅನ್ ಲಾಕ್ 3.0 ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ಮತ್ತಷ್ಟು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 9 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಇದು ಜುಲೈ 5ರ ಬೆಳಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಗ್ಗೆ 5ರ ವರೆಗೆ ಜಾರಿಯಲ್ಲಿರುತ್ತದೆ.

ಹೊಸ ಮಾರ್ಗಸೂಚಿ ಪ್ರಕಾರ ಸರಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಶೇ. 100ರಷ್ಟು ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಸರಕಾರಿ ಹಾಗೂ ಖಾಸಗಿ ಬಸ್ ಗಳಲ್ಲಿ ಕೂಡ ಶೇ.100ರಷ್ಟು ಪ್ರಯಾಣಿಕರಿಗೆ ಅನುವು ಮಾಡಿ ಕೊಡಲಾಗಿದೆ. ದೇವಾಲಯ, ಮಾಲ್, ಸ್ವಿಮ್ಮಿಂಗ್ ಪೂಲ್ ಸೇರಿದಂತೆ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಲಾಗಿದೆ. ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ ಮಾಡಲಾಗಿದೆ.

*  ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ.

* ಮಾಲ್ ಗಳನ್ನು ತೆರೆಯಲು ಗ್ರೀನ್ ಸಿಗ್ನಲ್.

* ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ.

* ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಒಪ್ಪಿಗೆ

* ಮದುವೆ ಹಾಗೂ ಇನ್ನಿತರ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ. 

* ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

* ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

* ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

* ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

* ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. * ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

* ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

* ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

* ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ. ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು