1:51 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಕ್ರೀಡಾಕೂಟ: ಕಬ್ಬಡಿಯಲ್ಲಿ ತರುವೆ ಏಕಲವ್ಯ ವಸತಿ ಶಾಲೆಗೆ ಚಿನ್ನ

26/12/2022, 17:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕೊಟ್ಟಿಗೆಹಾರ ತಾಲೂಕಿನ ತರುವೆ ಏಕಲವ್ಯ ಮಾದರಿ ವಸತಿ ಶಾಲೆಯ ಮಕ್ಕಳು ಕಬಡ್ಡಿ ಆಟದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ಪಡೆದಿದ್ದಾರೆ.

ಈ ತಿಂಗಳ 17ರಿಂದ 19ರ ವರೆಗೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದಂತಹ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಎದುರಾಳಿ ತಂಡವಾದ ತೆಲಂಗಾಣವನ್ನು ಅತಿ ಹೆಚ್ಚು ಅಂಕಗಳಿಂದ ಸೋಲಿಸುವುದರ ಮೂಲಕ ಕರ್ನಾಟಕದಿಂದ ಪ್ರತಿನಿಧಿಯಾದ ತರುವೆ ಶಾಲೆಯ ಮಕ್ಕಳು ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಚಿಕ್ಕಮಗಳೂರು ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಏಕಲವ್ಯ ಶಾಲೆ ಮೂರನೇ ಬಾರಿ ಈ ಸಾಧನೆ ಮಾಡಿದೆ ಎಂದು ಪ್ರಾಂಶುಪಾಲರು ತಿಳಿಸಿರುತ್ತಾರೆ.

ಶಾಲೆಯ ಮಕ್ಕಳಾದ ಅಂಕಿತ, ವಿಜಯದಶಮಿ, ವಿಜಯಲಕ್ಷ್ಮಿ ,ಸುಕನ್ಯಾ ,ಅರ್ಪಿತ ,ಸ್ಪಂದನ ,ಸಾನಿಕ ಮತ್ತು ಚಾಮರಾಜ ಜಿಲ್ಲೆಯ ಮಂಗಳ ಶಾಲೆಯ ಮೂರು ಮಕ್ಕಳು ಸೇರಿ ಈ ಕೀರ್ತಿಯನ್ನು ತಂದಿರುತ್ತಾರೆ ಎಂದು ಶಾಲೆಯ ವಾರ್ಡನ್ ಆದ ಕಲ್ಲೇಶ್ ಮತ್ತು ಪ್ರಾಂಶುಪಾಲರದ ಅಕ್ಷತಾ ಅವರು ತಿಳಿಸಿದ್ದಾರೆ. ಶಾಲೆಯಿಂದ ತರಬೇತುದಾರರಾದಂತಹ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಸನ್ನ ರವರು ಮತ್ತು ಸುಶ್ರೂಕಿಯಾದಂತಹ ಶೋಭಾ ಅವರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಈ ಸಾಧನೆಯನ್ನು ಕುರಿತು ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಕ್ರೈಸ್ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು