7:13 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಹಾವೇರಿ: ಭೀಕರ ರಸ್ತೆ ಅಪಘಾತಕ್ಕೆ ಕಾಸರಗೋಡಿನ ಇಬ್ಬರು ಸ್ಥಳದಲ್ಲೇ ಸಾವು; 4 ಮಂದಿಗೆ ಗಾಯ

28/12/2022, 17:29

ಹಾವೇರಿ(reporterkarnataka.com): ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ
ನಡೆದ ಭೀಕರ ರಸ್ತೆ ಅಪಘಾತ ದಲ್ಲಿ ಕಾಸರಗೋಡಿನ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್ಸಿಗೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಕಾರಿನಲ್ಲಿದ್ದರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಕಾಸರಗೋಡು ಜಿಲ್ಲೆಯ ತಳಂಗರೆಯ ಮುಹಮ್ಮದ್ (65) ಹಾಗೂ ಪತ್ನಿ ಆಯಿಷಾ (62) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಕಾರಿನಲ್ಲಿ ಸಿಲುಕಿದವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹವನ್ನು ಹಾನಗಲ್ ತಾಲೂಕು ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

ಕಾರಿನಲ್ಲಿದ್ದವರು ಹುಬ್ಬಳ್ಳಿಯಿಂದ ಹಾನಗಲ್ ಕಡೆ ಹೊರಟಿದ್ದರು. ಕಾರಿನಲ್ಲಿ 6 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು