3:16 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಮ್ಮೇದ ಶಿಖರ್ಜಿ ಪ್ರವಾಸಿ ತಾಣ: ಜೈನರ ಆಕ್ಷೇಪ; ಮೂಡುಬಿದರೆಯಲ್ಲಿ ಬೃಹತ್ ಜಾಥಾ

28/12/2022, 20:59

ಮೂಡುಬಿದಿರೆ(reporterkarnataka.com): ಜೈನ ಧರ್ಮೀಯರ ಪವಿತ್ರ ಕ್ಷೇತ್ರ ಜಾರ್ಖಂಡ್‌ನ ಶ್ರೀ ಸಮ್ಮೇದ ಶಿಖರ್ಜಿ ಪ್ರದೇಶವನ್ನು ಅಲ್ಲಿನ ಸರ್ಕಾರ ಪ್ರವಾಸಿ ತಾಣವನ್ನಾಗಿ ಮಾಡಲು ಹೊರಡಿಸಿದ ಆದೇಶದ ವಿರುದ್ಧ ದ.ಕ. ಮತ್ತು ಉಡುಪಿ ಜಿಲ್ಲೆಯ ಜೈನ ಸಮಾಜದವರಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಜಾಥಾ ನಡೆಯಿತು..

ಜೈನ ಮಠದ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ ಸಾವಿರ ಕಂಬ ಬಸದಿ ಆವರಣದಿಂದ ಮುಖ್ಯ ರಸ್ತೆಯ ಮೂಲಕ ಆಡಳಿತ ಸೌಧದವರೆಗೆ ದ.ಕ, ಉಡುಪಿ ಜಿಲ್ಲೆಯ ಸಾವಿರಾರು ಜೈನ ಸಮಾಜದವರು ಮೌನ ಪ್ರತಿಭಟನೆ ನಡೆಸಿದರು.

ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿ, ಸಮ್ಮೇದ ಶಿಖರ್ಜಿ ಜೈನರ ಪವಿತ್ರ ಕ್ಷೇತ್ರವಾಗಿದ್ದು 24 ತೀರ್ಥಂಕರರ ಪೈಕಿ ತೀರ್ಥಂಕರರು ಇಲ್ಲಿ ತಪಸ್ಸು ಮಾಡಿ ಸಿದ್ಧಿ ಪ್ರಾಪ್ತಿ ಹೊಂದಿದ ಪುಣ್ಯ ಭೂಮಿ. ನಿತ್ಯ ಸಾವಿರಾರು ಜೈನರು ಶ್ರದ್ಧಾ ಭಕ್ತಿಯಿಂದ ಕ್ಷೇತ್ರದ ದರ್ಶನ ಮಾಡಿ ಪುನೀತರಾಗುತ್ತಿದ್ದಾರೆ. ಇಂತಹ ಪವಿತ್ರ ಕ್ಷೇತ್ರವನ್ನು ಜಾರ್ಖಂಡ ಸರ್ಕಾರ ಪ್ರವಾಸಿ ತಾಣವಾಗಿಸಲು ತೀರ್ಮಾನ ಕೈಗೊಂಡಿರುವುದು ಅಲ್ಪ ಸಂಖ್ಯಾತ ಜೈನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದಂತಾಗಿದೆ‌ ಎಂದು ವಿರೋಧ ವ್ಯಕ್ತಪಡಿಸಿದರು. ದಬ್ಬಾಳಿಕೆಯನ್ನು ನಿಲ್ಲಿಸಿ ಪುಣ್ಯ ಭೂಮಿಯ ಪಾವಿತ್ರ್ಯತೆಯನ್ನು ರಕ್ಷಿಸಬೇಕು. ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಜಾರ್ಖಂಡ ಮುಖ್ಯಮಂತ್ರಿ, ರಾಷ್ಟ್ರಪತಿ, ಪ್ರಧಾಮಮಂತ್ರಿಯವರನ್ನು ಈ ಮೂಲಕ ಒತ್ತಾಯಿಸುತ್ತೇವೆ ಎಂದರು..

ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.ಅಳದಂಗಡಿ ಅರಮನೆಯ ಪದ್ಮಪ್ರಸಾದ್ ಅಜಿಲ, ಚೌಟರ ಅರಮನೆಯ ಕುಲದೀಪ್ ಎಂ., ಮಾಜಿ ಸಚಿವ ಅಭಯಚಂದ್ರ ಜೈನ್, ಜೈನ್ ಮಿಲನ್ ವಲಯ ಅಧ್ಯಕ್ಷ ಪುಷ್ಪರಾಜ್ ಜೈನ್, ಬಸದಿಗಳ ಮೊಕ್ತೇಸರರಾದ ಪಟ್ಣಶೆಟ್ಟಿ ಸುಧೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್, ಆದರ್ಶ್, ಜೈನ ಸಮಾಜದ ಪ್ರಮುಖರಾದ ಕೆ.ಪಿ ಜಗದೀಶ್ ಅಧಿಕಾರಿ, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಅಭಿಜಿತ್ ಎಂ, , ಡಾ.ಮಹಾವೀರ ಜೈನ್, ನಮಿರಾಜ್, ಧನಕೀರ್ತಿ ಬಲಿಪ, ರಾಜವರ್ಮ ಬೈಲಂಗಡಿ, ಸುಭಾಶ್ಚಂದ್ರ ಚೌಟ, ಯತಿರಾಜ್ ಜೈನ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಕೃಷ್ಣರಾಜ ಹೆಗ್ಡೆ ಸ್ವಾಗತಿಸಿ ಮುನಿರಾಜ ರೆಂಜಾಳ ನಿರೂಪಿಸಿದರು. ಶೈಲೇಂದ್ರ ಕುಮಾರ್ ಪ್ರಾಸ್ತಾವಿ ಮಾತುಗಳನ್ನಾಡಿದರು. ಪದ್ಮಪ್ರಸಾದ್ ಜೈನ್ ಮನವಿ ಪತ್ರ ವಾಚಿಸಿದರು. ಪ್ರವೀಣ್‌ಚಂದ್ರ ಜೈನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು