9:24 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

52 ಲಕ್ಷ ವೆಚ್ಚದಲ್ಲಿ ಇಡ್ಯಾ ಪಶ್ಚಿಮ ವಾರ್ಡ್‌ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

28/12/2022, 21:18

ಸುರತ್ಕಲ್ (reporterkarnataka.com):
52 ಲಕ್ಷ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಇಡ್ಯಾ ಪಶ್ಚಿಮ ವಾರ್ಡ್‌ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು, ಆಡಳಿತಾತ್ಮಕವಾಗಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರವಾಸೋದ್ಯಮ, ಮೂಲಸೌಕರ್ಯ, ನೀರಾವರಿ ಕೆಲಸಗಳಿಗೆ ಆದ್ಯತೆ ನೀಡಲಾಗಿದೆ. ವಾರ್ಡ್ 7ರಲ್ಲಿ ಲೋಕೋಪಯೋಗಿ, ನೀರಾವರಿ, ಪಾಲಿಕೆ, ರಾಜ್ಯದ ವಿಶೇಷ ಅನುದಾನದಡಿ ಈವರೆಗೆ 4.50 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ ಎಂದರು.

ಅಡ್ಯಾರು ಪ್ರದೇಶದ ಕಂದಾಯ ವಿಭಾಗವನ್ನು ಗುರುಪುರ ಹೋಬಳಿಯಿಂದ ಮಂಗಳೂರು ಹೋಬಳಿಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಸ್ಥಳೀಯ ಜನತೆಗೆ ಸಮಯ ಉಳಿತಾಯ ಹಾಗೂ ಕಡತ ವಿಲೇವಾರಿ ಸರಳವಾಗಲಿದೆ ಎಂದರು.

ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯೆ ನಯನ ಆರ್.ಕೋಟ್ಯಾನ್, ಪ್ರಮುಖರಾದ ವಿಠ್ಠಲ್ ಸಾಲಿಯಾನ್,ಜಯಂತ ಕರ್ಕೇರ,ಜಯಂತ ಸಾಲಿಯಾನ್,ದೀಪಕ್ ಅಮೀನ್,ಕೇಶವ ಕುಂದರ್ ಅಶೋಕ್ ಪುತ್ರನ್,ವಿಠ್ಠಲ್, ಧೀರಜ್,ಪ್ರವೀಣ್ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯರು ,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು