11:56 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಸ್ವಚ್ಛ ಕದಂಬಾಡಿ ಕಾರ್ಯಕ್ರಮ

28/12/2022, 21:28

ಪುತ್ತೂರು (reporterkarnataka.com): ಪುತ್ತೂರು ಸಂತ ಫಿಲೋಮಿನಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜಿನ ಅಂತರಿಕ ಗುಣಮಟ್ಟ ಭರವಸೆ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ದತ್ತು ಗ್ರಾಮವಾದ ಕದಂಬಾರಿಯಲ್ಲಿ ಸ್ವಚ್ಛ ಕದಂಬಾಡಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಿಲೆ ಪ್ರತಿಷ್ಠಾನದ ಆಧ್ಯಕ್ಷ ಕಡಮಜಲು ಸುಭಾಷ್ ರೈ ಅವರು, ಇತ್ತೀಚೆಗೆ ಪ್ಲಾಸ್ಟಿಕ್ ಬಳಕೆಯು ಅತಿಯಾಗಿದೆ. ಪ್ಲಾಸ್ಟಿಕ್‌ ಮಣ್ಣಿನಲ್ಲಿ ಬೆರೆಯುವುದಿಲ್ಲ. ಇದರ ಸಮರ್ಪಕ ನಿರ್ವಹಣೆ ಅಗತ್ಯ.

ಇದರಿಂದ ಪರಿಸರದ ಮೇಲಾಗುವ ಪ್ರತಿಕೂಲ ಪರಿಣಾಮಗಳನ್ನು ತರಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತನ್ ರೈ ಕುಂಬ್ರ ಅವರು “ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ
ಕರ್ತವ್ಯವಾಗಿದೆ. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮಗಳಾಗುತ್ತದೆ. ಗ್ರಾಮ ಸ್ವಚ್ಛತೆಯಲ್ಲಿ ವಿದ್ಯಾರ್ಥಿಗಳು ಕೈ ಜೋಡಿಸುತ್ತಿರುವುದು ನಮಗೆಲ್ಲ ಸಂತೋಷದ ವಿಚಾರ” ಎಂದು ಹೇಳಿದರು.

ಕಾಲೇಜಿನ ಎಸ್‌ ಎಸ್ ಎಸ್ ಅಧಿಕಾರಿ ಪ್ರೊ. ವಾಸುದೇವ ವಿದ್ಯಾರ್ಥಿಗಳಿಗೆ ಪರಿಸರ ಸ್ವಚ್ಛತೆಯ ಮಹತ್ವದ ಬಗ್ಗೆ ತಿಳಿಸಿದರು.
ವಿದ್ಯಾರ್ಥಿಗಳು ರಸ್ತೆಯ ಇಕ್ಕೆಲಗಳಲ್ಲೂ ಇರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿದರು. ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕಿ ಪ್ರಿಯಾ ಸ್ವಾಗತಿಸಿದರು.ಕೃಷ್ಣ ಕುಮಾರ್ ವಂದಿಸಿದರು. ಕಾಲೇಜಿನ ಎನ್ ಎಸ್ ಎಸ್‌ ಅಧಿಕಾರಿಯಾದ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು