2:42 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಹೊಸ ವರ್ಷಾಚರಣೆ: 3 ಗಸ್ತುಪಡೆ ರಚನೆ; ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನೇನಿದೆ?

29/12/2022, 22:42

ಮಂಗಳೂರು(reporterkarnataka.com): ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಮಾರ್ಗಸೂಚಿ ಪ್ರಕಟಿಸಿದೆ.

ದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದೆ.
ಹೊಸ ಮಾರ್ಗಸೂಚಿ ಪ್ರಕಾರ ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್,ಹೊಟೇಲ್ ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ 12:30ರವರೆಗೆ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದ ಉಂಟುಮಾಡುವ ಉಪಕರಣಗಳನ್ನು ರಾತ್ರಿ 10ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ ಒಳಪಟ್ಟು ಕಾರ್ಯಕ್ರಮವನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವಂತೆ ಆದೇಶಿಸಲಾಗಿದೆ.

ಸಭಾಂಗಣ, ತೆರೆದ ಸ್ಥಳ/ಹೊರಾಂಗಣ ಪ್ರದೇಶಗಳಾದ ಕಲ್ಯಾಣ ಮಂಟಪ, ಸಭಾ ಭವನ,ಸರ್ವೀಸ್ ಅಪಾರ್ಟೆಂಟ್, ಕಡಲತೀರ, ಹೋಂಸ್ಟೇ,ಮಾಲ್ ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ/ಡಾಲ್ಟಿ ಡ್ಯಾನ್ಸ್ ಗಳನ್ನು ನಡೆಸುವಂತಿಲ್ಲ. ವಿಶೇಷ ಪಾರ್ಟಿ ಇತ್ಯಾದಿ ಆಯೋಜಿಸುವ ಮುನ್ನ ಕಡ್ಡಾಯವಾಗಿ ನಗರ ಸ್ಥಳೀಯ ಸಂಸ್ಥೆ/ಗ್ರಾಮೀಣ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್ ಇಲಾಖೆಯ ಅನುಮತಿ ಪಡೆಯಬೇಕು. ಆದರೆ ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ನಡೆಸುವ ಮೇಲ್ವಿಚಾರಕರು/ಆಯೋಜಕರು ಸರ್ವೋಚ್ಚ ನ್ಯಾಯಾಲಯದ ಆದೇಶಗಳಿಗೆ ಮತ್ತು ಸರಕಾರದ ನಿಯಮಾವಳಿಗೆ ಒಳಪಟ್ಟು ಕ್ರಮ ಕೈಗೊಳ್ಳಬೇಕು.

ದಿನನಿತ್ಯ ನಡೆಯುವ ಕ್ಲಬ್/ಪಬ್/ರೆಸ್ಟೋರೆಂಟ್ ಗಳ
ದೈನಂದಿನ ವ್ಯವಹಾರ ನಡೆಸಲು ಹಾಗೂ ಪರ್ಮಿಟ್ಟಂತೆ ನಿಗದಿತ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು ಎಂದು ಸೂಚಿಸಲಾಗಿದೆ.

3 ಗಸ್ತು ಪಡೆ ಅಧಿಕೃತ/ನೋಂದಾಯಿತ ಕೇಂದ್ರಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಅಪರಿಚಿತರು, ಸಮಾಜಘಾತುಕ ಶಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಠಾಣೆಗೆ, ನಗರ ಪಾಲಿಕೆ, ಪ್ರವಾಸೋದ್ಯಮ ಇಲಾಖೆ, ಅಬಕಾರಿ ಇಲಾಖೆಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆ, ಪಾಲಿಕೆಯ ಅಧಿಕಾರಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಮೂರು ತಂಡಗಳ ಗಸ್ತು ಪಡೆಯನ್ನು ರಚಿಸಲಾಗಿದೆ. ಮಂಗಳೂರು ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಮಂಗಳೂರು ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಎಲ್ಲಾ ಸರ್ವಿಸ್ ಅಪಾರ್ಟೆಂಟ್, ಹೊಟೇಲ್, ಪಬ್, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು ಹೊಸ ವರ್ಷ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮತ್ತು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು