4:14 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕೃಷ್ಣಾನದಿ ದುರಂತದಲ್ಲಿ ಮಡಿದ 4 ಮಂದಿ ಸಹೋದರರ ಮನೆಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ್ ಭೇಟಿ

05/07/2021, 08:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದವರ ಈ ದುರ್ಘಟನೆ ವಿಪತ್ತು ಪರಿಹಾರ ನಿಧಿ ವ್ಯಾಪ್ತಿಗೆ ಬರುವುದಿಲ್ಲ, ಆದರೆ ನಮ್ಮ ಸರಕಾರದ ಯಾವುದಾದರೊಂದು ಯೋಜನೆಯಡಿ ಖಂಡಿತವಾಗಿ ಬನಸೋಡೆ ಕುಟುಂಬಕ್ಕೆ ಪರಿಹಾರ ಕೊಡಿಸ್ತೀವಿ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಈ ಕುಟುಂಬಕ್ಕೆ ಖಂಡಿತವಾಗಿ ಪರಿಹಾರ ಕೊಡಿಸ್ತಿವಿ ಜೊತೆಗೆ ಅವರ ಮಕ್ಕಳ ವಿದ್ಯಾಭ್ಯಾಸವನ್ನು ಸರಕಾರಿ ವಸತಿ ಶಾಲೆಯಲ್ಲಿ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ನಮ್ಮದು, ಮೇಲಾಗಿ ಈ ಕುಟುಂಬದ ಹಿನ್ನಲೆ ಕೇಳಿ ಬಹಳ ದುಖಃವಾಗಿದೆ ಹಾಗೂ ಈ ಘಟನೆ ಸಂಭವಿಸಿದ ಕ್ಷಣದಿಂದ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತದ ಜೊತೆ ಅಥಣಿ ತಾಲೂಕಿನ ಶಾಸಕರು ಹಾಗೂ ಉಪಮುಖ್ಯ ಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದರು, ಈ ವಿಷಯ ತಿಳಿಸುತ್ತಿದ್ದಂತೆ ನಾವು ಮಹಾರಾಷ್ಟ್ರದ ಕೊಲ್ಲಾಪುರ್ ಜಿಲ್ಲಾಧಿಕಾರಿ ಜೊತೆಯಲ್ಲಿ ಮಾತನಾಡಿ ಸ್ಥಳಕ್ಕೆ ನುರಿತ ಈಜುಗಾರರನ್ನು ಕಳಿಸಿದೆವು ಎಂದು ತಿಳಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಉಪತಶಿಲ್ದಾರ ಮಹಾದೇವ್  ಬಿರಾದಾರ್, ಡಿವೈಎಸ್ಪಿ ಎಸ್ ವಿ ಗಿರೀಶ್, ಪಿಎಸ್ಐ ಕುಮಾರ್ ಹಾಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ಯಲ್ಲಾಲಿಂಗ್ ಪಾಟೀಲ್, ರಮೇಶ್ ಮಾಂಗ್, ಅಪ್ಪಣ್ಣ ಸನದಿ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ಜಾಯಗೋಣಿ, ಸಂತೋಷ ಪಾರ್ಥನಳ್ಳಿ, ವಿಠ್ಠಲ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು