ಇತ್ತೀಚಿನ ಸುದ್ದಿ
ಅಥಣಿ ಪೊಲೀಸ್ ಠಾಣೆಯ ಎಎಸ್ ಐ ನೇಣಿಗೆ ಶರಣು: ಕಾರಣ ಇನ್ನೂ ನಿಗೂಢ
30/12/2022, 21:15

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.ಕಾಂ
ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆಯ ಎಎಸ್‌ಐ ನೇಣಿಗೆ ಶರಣಾಗಿರುವ ದುರ್ಘಟನೆ ನಡೆದಿದೆ.
ಎಎಸ್‌ಐ ರಾಮಲಿಂಗ ನಾಯಕ್ (49) ನೇಣು ಹಾಕುವ ಮೂಲಕ ಸಾವಿಗೆ ಶರಣಾಗಿದ್ದಾರೆ.
ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಬೈಕ್ ನಿಲ್ಲಿಸಿ ಶೆಡ್‌ಗೆ ಹೊಂದಿಕೊಂಡಿರುವ ಕಂಬಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹಾರೂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಹಾರೂಗೇರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.