3:46 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ

ಇತ್ತೀಚಿನ ಸುದ್ದಿ

ಹಂತ ಹಂತವಾಗಿ ಮಂಗಳೂರಿನ ಉದ್ಯಾನವನಗಳ ಅಭಿವೃದ್ಧಿ; ಶಾಸಕ ವೇದವ್ಯಾಸ ಕಾಮತ್

31/12/2022, 23:47

ಮಂಗಳೂರು(reporterkarnataka.com): ನಗರದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಅನೇಕ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದ್ದು, ಹಂತ ಹಂತವಾಗಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಾಲಿಕೆಯ ಕಂಕನಾಡಿ ವಾರ್ಡಿನ ಎಕ್ಕೂರು ಕೆ.ಎಚ್.ಬಿ ಲೇಔಟ್ ನಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ನಗರದಲ್ಲಿ ಈಗ ಇರುವ ಪಾರ್ಕ್ ಅಭಿವೃದ್ಧಿ ಹಾಗೂ ಹೊಸ‌ ಪಾರ್ಕ್ ನಿರ್ಮಾಣಕ್ಕಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ಹೊಂದಿಸಲಾಗಿದೆ. ಮುಂದಿನ ದಿನಗಳಲ್ಲಿ ನಗರದಲ್ಲಿ ಹಿರಿಯ ನಾಗರಿಕರಿಗೆ ವಾಯು ವಿಹಾರ ಸೇರಿದಂತೆ ಮಕ್ಕಳಿಗೂ ಉಪಯೋಗವಾಗುವಂತೆ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಶೋಭಾ ಪೂಜಾರಿ, ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಕಿರಣ್ ರೈ, ಭರತ್ ರಾಜ್, ರಾಜೇಶ್, ವಸಂತ್ ಜೆ ಪೂಜಾರಿ, ಕೃಷ್ಣ ಬಂಗೇರ, ಮಂಜುನಾಥ ರೈ, ಶಿವಕುಮಾರ್, ವಸಂತ ರಾವ್, ಪೂರ್ಣಿಮಾ ಪ್ರಮೋದ್, ರಾಘವೇಂದ್ರ ಶೆಟ್ಟಿ, ರಾಮ್ ಪ್ರಸಾದ್, ನಿತ್ಯಾನಂದ ಕೊಕ್ಕಡ, ಸವಿತಾ ವಸಂತ್, ವಿದ್ಯಾ ಶಶಿಧರ್, ಸೀತಮ್ಮ, ಲೋಕೇಶ್ ಕುತ್ತಡ್ಕ, ರೇಖಾ, ಸುಮತಿ ಚಂದ್ರಶೇಖರ್, ಸುಜಾತ, ಭಾಸ್ಕರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು