9:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಆರೆಸ್ಸೆಸ್ ಗೆ ಮಾತ್ರ ಮುಖ್ಯಮಂತ್ರಿಯಲ್ಲ; ಕೋಮುವಾದ ಮೂಲ ಬೇರು ಕರಾವಳಿ: ಮಾಜಿ ಸಿಎಂ ಸಿದ್ದರಾಮಯ್ಯ

06/01/2023, 13:23

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಗೆ ಮಾತ್ರ ಮುಖ್ಯಮಂತ್ರಿಯಲ್ಲ. ರಾಜ್ಯದ 7 ಕೋಟಿ ಜನರ ಪ್ರತಿನಿಧಿ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೋಮುವಾದ ಮೂಲ ಬೇರು ಕರಾವಳಿ. ದೇಶದ ಸಂವಿಧಾನದ ಮೇಲೆ ವಿಶ್ವಾಸ ಇಲ್ಲದೇ ಇರುವವರು ಜನಪ್ರತಿನಿಧಿಗಳಾಗಲು ಅರ್ಹರಲ್ಲ ಎಂದರು.
ಕರಾವಳಿ ಕೋಮುವಾದದ ಪ್ರಯೋಗ ಶಾಲೆ ಆಗಿದೆ. ಎಲ್ಲ ಕಡೆಗಳಲ್ಲಿಯೂ ಹಿಂದೂತ್ವವನ್ನು ತರಲಾಗುತ್ತಿದೆ. ಯಕ್ಷಗಾನ ಕಲೆಗೂ ಹಿಂದೂತ್ವ ನಂಟು ಬೇಸೆಯುತ್ತಾರೆ. ಬಿಜೆಪಿ, ಆರ್ ಎಸ್ ಎಸ್ ಗೆ ಅದುವೇ ಬಂಡವಾಳ ಆಗಿಬಿಟ್ಟಿದೆ ಎಂದು ಹೇಳಿದರು.

ಸಂಸದ ಅನಂತ ಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಎಂದು ಬೊಬ್ಬೆ ಹಾಕಿದಾಗ ಮೋದಿ, ಅಮಿತ್ ಶಾ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಮೋದಿ, ಅಮಿತ್ ಷಾ‌ ಇಬ್ಬರು ಅನಂತ ಕುಮಾರ್ ಮೂಲಕ ಹೇಳಿಸಿದ್ದು ಅನ್ನೋದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ನುಡಿದರು.

ಪ್ರತಿಪಕ್ಷದ ಉಪ ನಾಯಕ, ಸ್ಥಳೀಯ ಶಾಸಕ ಯು.ಟಿ ಖಾದರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ,ಮಾಜಿ ಸಚಿವ ರಮಾನಾಥ ರೈ ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು