8:52 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ದಾವಣಗೆರೆಯಲ್ಲಿ ರಸ್ತೆ ಅಪಘಾತ: ನಾವುಂದದ ಛಾಯಾಗ್ರಾಹಕ ಹಾಗೂ ಪುತ್ರನಿಗೆ ತೀವ್ರ ಗಾಯ

05/07/2021, 19:37

ದಾವಣಗೆರೆ (reporterkarnataka news): ದಾವಣಗೆರೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ನಾವುಂದದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಹಾಗೂ ಅವರ ಪುತ್ರ ಪನ್ನಗ ಶೆಟ್ಟಿ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಕಂಟೈನರ್ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಮುಂಜಾನೆ ಸುಮಾರು 3 ಗಂಟೆಗೆ ಅಪಘಾತ ಸಂಭವಿಸಿದ್ದು, ಕಾರನ್ನು ಪನ್ನಗ ಶೆಟ್ಟಿ ಚಲಾಯಿಸುತ್ತಿದ್ದರು. ಕಾರಿನ ಹಿಂಭಾಗದ ಸೀಟಿನಲ್ಲಿ ಕುಳಿತ್ತಿದ್ದ ಕುಮಾರ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ನಾವುಂದದ ಮಾನಸ ಸ್ಟುಡಿಯೋ ಮಾಲಕರಾಗಿರುವ ಅಶೋಕ್ ಕುಮಾರ್ ಶೆಟ್ಟಿ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣ ಮುಗಿಸಿ ಮಗನ ಜತೆ ವಾಪಸ್ ಊರಿಗೆ ಬರುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು