5:22 AM Tuesday21 - May 2024
ಬ್ರೇಕಿಂಗ್ ನ್ಯೂಸ್
ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;…

ಇತ್ತೀಚಿನ ಸುದ್ದಿ

ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವ್ಯವಸ್ಥೆ: ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳಿಂದ ಪ್ರತಿಭಟನೆ

06/01/2023, 20:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾವೇರಿಯಲ್ಲಿ ನಡೆದ ೮೬ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿದರು.

ದೂರ ದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್ ಗೆ ಹೋದರೆ ಕೌಂಟರ್ ನಲ್ಲಿ ಕೇಳುವವರೇ ಇಲ್ಲ. ಆನ್ ಲೈನ್ ನಲ್ಲಿ ನೊಂದಣಿ ಮಾಡಿದವರು ನೊಂದಣಿಯ ಬಗ್ಗೆ ವಿಚಾರಿಸಿದರೇ ನೊಂದಣಿ ಕೌಂಟರಿನಲ್ಲಿ ನೊಂದಣಿ ಮಾಡಿಕೊಂಡ ವಿವರಗಳು ಇಲ್ಲ. ವಸತಿ ಸೌಕರ್ಯ ಕಲ್ಪಿಸಿರುವವಲ್ಲಿನ ಅಧಿಕಾರಿಗಳಿಗೆ ಕರೆ ಮಾಡಿದರೇ ಸಂಪರ್ಕಕ್ಕೆ ಸಿಗುತ್ತಿಲ್ಲ. ಹಣ ಕಟ್ಟಿದರೂ ಕೂಡ ನೋಂದಣಿ ಕೌಂಟರ್ ನಲ್ಲಿ ಬ್ಯಾಗ್ ಮತ್ತು ಇತರ ಸೌಲಭ್ಯ ಇಲ್ಲ ಎನ್ನುತ್ತಿದ್ದಾರೆ ಎಂದು ಸಮ್ಮೇಳನದ ನೋಂದಣಿ ಕೌಂಟರ್ ನ ಮುಂದೆ ದಿಡೀರ್ ಪ್ರತಿಭಟನೆ ನಡೆಸಿದರು‌.

ಇತ್ತೀಚಿನ ಸುದ್ದಿ

ಜಾಹೀರಾತು