ಇತ್ತೀಚಿನ ಸುದ್ದಿ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ
07/01/2023, 09:41

ಬೆಂಗಳೂರು(reporterkarnataka.com) : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಲ್ಲಿಸಿರುವ ‘ಬಿ’ ರಿಪೋರ್ಟ್‍ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯದ ಸುಪರ್ದಿಗೆ ನೀಡುವಂತೆ 42ನೇ ವಿಶೇಷ ಕೋರ್ಟ್ ಆದೇಶಿಸಿದೆ. ಇದರೊಂದಿಗೆ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಸಂತೋಷ್ ಮೃತದೇಹ ಸಿಕ್ಕ ಹೋಟೆಲ್ ಸಿಸಿಟಿವಿ ನೀಡಬೇಕು, ಮಾತ್ರವಲ್ಲದೆ ಪೊಲೀಸರು ಮಾಡಿದ ವಿಡಿಯೋವನ್ನು ಜ.31ರಂದು ತನಿಖಾಧಿಕಾರಿಯೇ ಖುದ್ದು ಕೋರ್ಟ್ ಮುಂದೆ ಹಾಜರಾಗಿ ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ.
ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಸಂತೋಷ್ ಪಾಟೀಲ್ ಸಹೋದರ, ಅಸಲಿ ಸಾಕ್ಷ್ಯಗಳನ್ನು ಮರೆಮಾಚಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು. ಪೊಲೀಸರೇ ಉಲ್ಲೇಖಿಸಿರುವ ಸಾಕ್ಷ್ಯಗಳನ್ನು ಕೋರ್ಟ್‍ಗೆ ಹಾಜರುಪಡಿಸಿಲ್ಲ. ಹೀಗಾಗಿ, ಪೊಲೀಸರ ಬಳಿ ಇರುವ ಸಾಕ್ಷಿ ಹಾಜರುಪಡಿಸಿದರೆ ಸತ್ಯ ಬಯಲಿಗೆ ಬರುವ ಸಾಧ್ಯತೆ ಇದೆ.