11:33 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಜಿಪಿಎಲ್ ಉತ್ಸವ – 2023 ಆಮಂತ್ರಣ ಪತ್ರಿಕೆ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಧೋನಿ ಬಿಡುಗಡೆ

08/01/2023, 18:54

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ – 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರು ನಗರದಲ್ಲಿ ಶನಿವಾರ ಬಿಡುಗಡೆಗೊಳಿಸಿದರು.

ಇದೇ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರೂ, ಜಿಪಿಎಲ್ ಉತ್ಸವದ ಪ್ರಮುಖರೂ ಆದ ವೇದವ್ಯಾಸ ಕಾಮತ್ ಅವರು ಫೆಬ್ರವರಿ 10, 11, 12 ರಂದು ಅಡ್ಯಾರ್ ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಚ್ಚಹಸುರಿನ ಸುಂದರ ಕ್ರೀಡಾಂಗಣದಲ್ಲಿ ನಡೆಯುವ ಜಿಪಿಎಲ್ ಉತ್ಸವಕ್ಕೆ ಧೋನಿ ಅವರನ್ನು ಆಮಂತ್ರಿಸಿದರು. ಜಿಪಿಎಲ್ ಟ್ರೋಫಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಧೋನಿಯವರು ಭಾಗವಹಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವೇದವ್ಯಾಸ ಕಾಮತ್ ಅವರೊಂದಿಗೆ ಜಿಪಿಎಲ್ ಉತ್ಸವದ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್, ಕೊಂಚಾಡಿ ಗುರುಪ್ರಸಾದ್ ಕಾಮತ್, ಕಾನೆಂಗಾಡ್ ಗುರುಪ್ರಸಾದ್ ಕಾಮತ್ ಉಪಸ್ಥಿತರಿದ್ದರು.


7 ನೇ ವರ್ಷದ ಜಿಪಿಎಲ್ ಉತ್ಸವ- 2023 ಈ ಬಾರಿಯೂ ವಿಶೇಷ ಹಬ್ಬದಂತೆ ಆಯೋಜಿಸಲಾಗುತ್ತಿದ್ದು, ಕ್ರಿಕೆಟ್ ಪಂದ್ಯಾಟಗಳೊಂದಿಗೆ ಹೆಲಿಕಾಪ್ಟರ್ ರೌಂಡ್, ಬೋಟಿಂಗ್, ಕಿಡ್ಸ್ ಝೋನ್, ಮೂರು ಮುತ್ತು ತಂಡದಿಂದ ನಾಟಕ ಪ್ರದರ್ಶನ, ಬೊಂಬೆಯಾಟ, ವಾಯ್ಸ್ ಆಫ್ ಜಿಎಸ್ ಬಿ ಅಡಿಶನ್, ವೆರೈಟಿ ಎಂಟರ್ ಟೇನ್ ಮೆಂಟ್, ಫುಡ್ ಕೋರ್ಟ್ ಸಹಿತ ಹಲವಾರು ಆಕರ್ಷಣೆಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು