12:35 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ 4ನೇ ದರೂರ ಶಾಖೆ ಉದ್ಘಾಟನೆ

08/01/2023, 19:12

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಅಂಕಲಿ 49 ನೇ ದರೂರ ಶಾಖೆ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಇದೆ ವೇಳೆ ಮಾತನಾಡಿದ ಅಮಿತ ಪ್ರಭಾಕರ ಕೋರೆ, ನಮ್ಮ ಕಾರ್ಖಾನೆಗೆ ಇಲ್ಲಿಂದ ಕಬ್ಬು ಬರುವುದರಿಂದ ರೈತರಿಗೆ ಅನುಕೂಲ ಆಗಲಿ ಎಂದು ದರೂರ್ ಶಾಖೆಯನ್ನು ಪ್ರಾರಭಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳಬೇಕು ಎಂದರು.

ನಂತರ ಮಾತನಾಡಿದ ಲಕ್ಷ್ಮಣ ಸಂಗಪ್ಪ ಸವದಿ ಅವರು, ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಸಾಗುತ್ತಿರುವ ಈ ಸಹಕಾರಿ ಬ್ಯಾಂಕಿಗೆ ಜನರ ಅಪಾರ ನಂಬಿಕೆ ಇದ್ದು ಈ ಸಹಕಾರಿ ಸಾಮಿತ್ಯದ ಬ್ಯಾಂಕ್ ಎತ್ತರಕ್ಕೆ ಬೆಳೆಯಲಿ ಮತ್ತು ಕೆ ಎಲ್ ಇ ಸಂಸ್ಥೆಯು ಕರ್ನಾಟಕ ಮಾತ್ರ ಸೀಮಿತವಾಗಿ ಇರದೇ ಹೊರ ದೇಶಕ್ಕೆ ತನ್ನ ಅಂಗ ಸಂಸ್ಥೆಗಳನ್ನು ರಚಿಸಿ ದೇಶವ್ಯಾಪಿ ಹೆಸರು ಮಾಡಿದೆ ಎಂದು ಹಾರೈಸಿದರು‌.
ದೇಶದಲ್ಲಿ ಏತನಾಲ್ ಉತ್ಪಾದನೆ ಹೆಚ್ಚಾಗುವುದರಿಂದ ಮುಂಬರುವ ದಿನಗಳಲ್ಲಿ ಕಬ್ಬು ಭತ್ತ, ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ದೊರೆಯಲಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದರು.


ಇದೇ ವೇಳೆ ಲಕ್ಷ್ಮಣ ಸಂಗಪ್ಪ ಸವದಿ, ಅಮಿತ ಪ್ರಭಾಕರ ಕೋರೆ, ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಚಿಕ್ಕೋಡಿ
ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳ ನಿ ಹೊಸದೆಹಲಿ ಸಿದಗೊಂಡ ಭೀ. ಗುಮತಾಜ ಪ್ರಧಾನ ವ್ಯವಸ್ಥಾಪಕರು
ಹಾಗೂ ದಿಗ್ಧರ್ಶಕರು, ಸದಸ್ಯರು, ಸಿಬ್ಬಂದಿ ವರ್ಗ, ಸಮಸ್ತ ದರೂರು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು