11:52 PM Tuesday24 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ವಿವಿಧ ಬೇಡಿಕೆ ಆಗ್ರಹಿಸಿ ಪೌರ ಕಾರ್ಮಿಕರ ಮುಷ್ಕರ: ತ್ಯಾಜ್ಯ ಸಾಗಾಟ ವಾಹನಗಳನ್ನು ನಿಲ್ಲಿಸಿ ಆಕ್ರೋಶ; ಮೇಯರ್ ಭೇಟಿ

09/01/2023, 18:11

ಮಂಗಳೂರು(reporterkarnataka.com): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಫಾಯಿ ಕರ್ಮಚಾರಿಗಳು ಸೋಮವಾರ ಕೆಲಸವನ್ನು ಸ್ಥಗಿತ ಮಾಡಿ ಮುಷ್ಕರ ನಡೆಸಿದ್ದು, ಕೂಳೂರು ಗೋಲ್ಡ್ ಪಿಂಚ್ ಮೈದಾನದ ಎದುರು ತ್ಯಾಜ್ಯ ಸಾಗಣೆಯ ವಾಹನಗಳನ್ನು ನಿಲ್ಲಿಸಿ ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದರು. ಈ ನಡುವೆ ಮೇಯರ್ ಜಯಾನಂದ ಆಂಚನ್ ಅವರು ಮುಷ್ಕರ ನಿರತರ ಭೇಟಿಯಾಗಿ ಮಾತುಕತೆ ನಡೆಸಿದರು.

ಸರಕಾರವು ನಿಗದಿಗೊಳಿಸಿದ ವೇತನವನ್ನು ಆ್ಯಂಟನಿ ವೇಸ್ಟ್ ಕಂಪನಿ ನೀಡದೆ ವಂಚಿಸುತ್ತಿದೆ. ಇದನ್ನು ಯಥಾವತ್ತಾಗಿ ನೀಡಬೇಕು. ಕಾರ್ಮಿಕರ ಗಳಿಕೆ ರಜೆ ಮತ್ತು ನಿಗದಿತ ರಜೆ, ಉಪಹಾರ ಬತ್ಯೆ ನೀಡಬೇಕು. ದುರಸ್ತಿ ಆಗದೇ ಇರುವ ವಾಹನಗಳನ್ನು ಬದಲಾಯಿಸಬೇಕು. ನಿಗದಿತ ಸಮಯಕ್ಕಿಂತ ಹೆಚ್ಚುವರಿ ದುಡಿಸಿಕೊಳ್ಳುವುದನ್ನು ಸ್ಥಗಿತ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂಬಿ ನಾಗಣ್ಣಗೌಡ, ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಅಧ್ಯಕ್ಷ ಕೆ.ನಾರಾಯಣ ಶೆಟ್ಟಿ, ಕರ್ನಾಟಕ ಹೊರಗುತ್ತಿಗೆ ನೌಕರರ ಸಂಘದ ಮುಖಂಡ ಎಂ.ಚಂದ್ರು, ಹೊರಗುತ್ತಿಗೆ ನೌಕರರ ಸಂಘದ ಕರಾವಳಿ ವಿಭಾಗದ ಸಂಚಾಲಕ ಅಣ್ಣಪ್ಪಕೆರೆಕಾಡು ಅವರು ಮಾತನಾಡಿದರು.
ಮೇಯರ್ ಜಯಾನಂದ ಅಂಚನ್, ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್, ಆರೋಗ್ಯ ಇಲಾಖೆಯ ಅಧಿಕಾರಿ ಮಂಜಯ್ಯ ಶೆಟ್ಟಿ, ವಲಯ ಆಯುಕ್ತ ಶಬರಿನಾಥ ರೈ ಅವರು ಧರಣಿನಿರತ ಸ್ಥಳಕ್ಕೆ ಭೇಟಿ ನೀಡಿ ಪೌರ ಕಾರ್ಮಿಕರ ಜೊತೆ ಮಾತುಕತೆ ನಡೆಸಿದರು.‌

ಮಂಗಳವಾರ ಸಂಜೆ 5ಕ್ಕೆ ನಗರಪಾಲಿಕೆಯ ಅಧಿಕಾರಿಗಳು ಹಾಗೂ ಆ್ಯಂಟನಿ ವೇಸ್ಟ್ ಕಂಪನಿ ಮುಖ್ಯಸ್ಥರು ಮತ್ತು ಸಂಘಟನೆಯ ಪ್ರಮುಖರ ಜತೆಗೆ ವಿಶೇಷ ಸಭೆ ನಡೆಸಿ ಕಾರ್ಮಿಕರ ಬೇಡಿಕೆ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.
ಮಂಗಳೂರು ಸಪಾಯಿ ಕರ್ಮಚಾರಿಗಳ ಸಂಘದ ಮುಖಂಡ ಅಶೋಕ್ ಕೊಂಚಾಡಿ, ದಿನೇಶ್ ಕುಲಾಲ್, ಚೆನ್ನಕೇಶವ, ಸುಧೀರ್, ಸಿದ್ದರೂಡ, ಪೂವಪ್ಪ ಅವರು ಧರಣಿ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು