ಇತ್ತೀಚಿನ ಸುದ್ದಿ
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದ.ಕ. ಜಿಲ್ಲಾಧ್ಯಕ್ಷರಾಗಿ ಪರಿಮಳ ಮಹೇಶ್ ರಾವ್ ಅಧಿಕಾರ ಸ್ವೀಕಾರ
11/01/2023, 16:57

ಮಂಗಳೂರು(reporterkarnataka.com): ವೃತ್ತಿ ಯಲ್ಲಿ ವಕೀಲೆ ಪ್ರವೃತ್ತಿ ಯಲ್ಲಿ ಕವಯತ್ರಿ ಮಕ್ಕಳ ಸಾಹಿತಿಯಾಗಿರುವ ಮಂಗಳೂರು ಮೂಲದ ಪರಿಮಳ ಮಹೇಶ್ ರಾವ್ ಇವರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾ ಅಧ್ಯಕ್ಷ ರಾಗಿ ಅಧಿಕಾರ ಸ್ವೀಕರಿಸಿದರು.
ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ ನಡೆದ ಬೃಹತ್ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಎನ್.ಅಶೋಕ ನಿರ್ದೇಶನದಂತೆ , ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಅರುಣ್ ಅಧಿಕಾರ ಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಕುಸುಮ ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.