ಇತ್ತೀಚಿನ ಸುದ್ದಿ
ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ: ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗಿ
12/01/2023, 20:08

ಹುಬ್ಬಳ್ಳಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ್ದು, ಪ್ರಧಾನಿ ಅವರನ್ನು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು.
ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ , ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.