12:44 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮೂಡಿಗೆರೆ: ಟಿಕೆಟ್ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಮೋಟಮ್ಮ ಕುಟುಂಬಕ್ಕೆ ವಿರೋಧ

13/01/2023, 15:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರ್ಟಿಯಲ್ಲಿ ಟಿಕೆಟ್ ಭಾರೀ ಜೋರಿನಲ್ಲಿ ಫೈಟ್ ಶುರುವಾಗಿದೆ. ಮೂಡಿಗೆರೆ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಿನ್ಬಮತ ತಾಕಲಾಟ ಆರಂಭವಾಗಿದೆ.

ಒಂದೆಡೆ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವ ಆಕ್ಷಾಂಕಿಗಳು ಮತ್ತೊಂದೆಡೆ ಕೈ ಮುಖಂಡರ ಭಿನ್ನಮತದ ಸಭೆ ಮೇಲಿಂದ ಮೇಲೆ ನಡೆಯುತ್ತಿದೆ.
ಮಾಜಿ ಸಚಿವೆ ಮೋಟಮ್ಮ ಹಾಗೂ ಪುತ್ರಿ ನಯನಾ ಮೋಟಮ್ಮ ವಿರುದ್ಧ ಬಂಡಾಯದ ಸಭೆ ಆಗಾಗ ನಡೆಯುತ್ತಿದೆ. ಒಂದು ತಿಂಗಳ ಅಂತರದಲ್ಲಿ ಐದು ಸಭೆಗಳನ್ನು ಕೈ ಮುಖಂಡರು ನಡೆಸಿದ್ದಾರೆ.


ನಯನ ಮೋಟಮ್ಮ ಹೊರತುಪಡಿಸಿ ಉಳಿದ ಆಕ್ಷಾಂಕಿಗಳು ಕೂಡ ಬಂಡಾಯದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಡಿ‌.ಕೆ. ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ನಯನ ಮೋಟಮ್ಮ ವಿರುದ್ಧ ಬಂಡಾಯದ ಧ್ವಜ ಹಾರಲಾರಂಭಿಸಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡಿದಂತೆ ವರಿಷ್ಠರಿಗೆ ಮನವಿ ಸಲ್ಲಿಸಲು ಸ್ಥಳೀಯ ಕೆಲವು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ.

ಸಭೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಕಾಂಗ್ರೆಸ್ ಮುಖಂಡರು, ಗ್ರಾ.ಪಂ ಸದಸ್ಯರು ಭಾಗಿಯಾಗಿದ್ದರು. ಗೋಣಿಬೀಡು ಹೋಬಳಿಯಲ್ಲಿ ಬಂಡಾಯದ ಸಭೆ ಕೈ ಮುಖಂಡರು ನಡೆಸಿದ್ದಾರೆ.

ನಯನ ಮೋಟಮ್ಮಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುತ್ತೆ ಎಂದು ಸಭೆಯಲ್ಲಿ ಮಾಜಿ ಸಚಿವೆ ಮೋಟಮ್ಮ ವಿರುದ್ದ ಕಾರ್ಯಕರ್ತರುಕಿಡಿ ಕಾರಿದ್ದಾರೆ. ಮೂಡಿಗೆರೆಯಲ್ಲಿ ಮೋಟಮ್ಮನವರ ಕುಟುಂಬ ರಾಜಕಾರಣ ಕೊನೆ ಆಗಬೇಕು. ವಿಧಾನಪರಿಷತ್ ಚುನಾವಣೆಯಲ್ಲಿ ಗಾಯತ್ರಿ ಶಾಂತೇಗೌಡರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಮೋಟಮ್ಮ ವಿರುದ್ಧ ಕಿಡಿ ಕಾರಿದ್ದಾರೆ.
ಇಡೀ ಕ್ಷೇತ್ರದ ಜನರು ಮೋಟಮ್ಮ ಕುಟುಂಬದ ವಿರುದ್ಧವಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡದಂತೆ ವರಿಷ್ಠರಲ್ಲಿ ಮನವಿ ಮಾಡಬೇಕೆಂದು ಸಭೆ ಸೇರಿದ ಮುಖಂಡರು ನಿರ್ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು