12:43 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಸ್ಯಾಂಟ್ರೋ ರವಿ ಗುಜರಾತಿನಲ್ಲಿ ಬಂಧನ: ಮೈಸೂರಿನಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ರವಿ

13/01/2023, 18:37

ಬೆಂಗಳೂರು(reporterkarnataka.com): ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ರಾಜ್ಯದಿಂದ ಪರಾರಿಯಾದ ಸ್ಯಾಂಟ್ರೋ ರವಿಯನ್ನು ಗುಜರಾತಿನಲ್ಲಿ ಶುಕ್ರವಾರ ಬಂಧಿಸಲಾಗಿದೆ.

ಮೈಸೂರಿನಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದಂತೆ ರವಿ ನಾಪತ್ತೆಯಾಗಿದ್ದ. ಈ ವೇಳೆ ಸ್ಯಾಂಟ್ರೋ ರವಿ ವಿದೇಶಕ್ಕೆ ಹಾರಿರಬಹುದು ಎನ್ನುವ ಬಗ್ಗೆಯೂ ಶಂಕೆ ವ್ಯಕ್ತವಾಗಿತ್ತು. ಆದರೆ ಸ್ಯಾಂಟ್ರೋ ರವಿಯನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶುಕ್ರವಾರ ಸ್ಯಾಂಟ್ರೊ ರವಿ ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದರು. ಮೈಸೂರು, ರಾಮನಗರ ಪೊಲೀಸರು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಸ್ಯಾಂಟ್ರೊ ರವಿ ಪತ್ತೆಗಾಗಿ ಹುಡುಕಾಟ ನಡೆಸಿದ್ದರು.

ನಾಲ್ವರು ಎಸ್ಪಿಗಳ ನೇತೃತ್ವದಲ್ಲಿ ಸ್ಯಾಂಟ್ರೊ ರವಿ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ಗುಜರಾತ್‌ನಲ್ಲಿ ಬಂಧಿಸಿ ಪೊಲೀಸರು ಕರ್ನಾಟಕಕ್ಕೆ ಕರೆತರುತ್ತಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೊ ರವಿ ವಿರುದ್ಧ ದೂರು ದಾಖಲಾದ ಬಳಿಕ ಆತ ಪರಾರಿಯಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು