6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

‘ನಾ ನಾಯಕಿ’ ಸಮಾವೇಶ: ಜ.16ರಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ: ದ.ಕ. ಜಿಲ್ಲೆಯಿಂದ ನೂರಾರು ಕಾರ್ಯಕರ್ತರು

14/01/2023, 11:58

ಬೆಂಗಳೂರು(reporterkarnataka.com): ರಾಜ್ಯ ಮಹಿಳಾ ಕಾಂಗ್ರೆಸ್ ನಿಂದ
ಬೆಂಗಳೂರಿನ ಅರಮನೆ ಮೈದಾನದಲ್ಲಿ “ನಾ ನಾಯಕಿ” ಸಮಾವೇಶವನ್ನು ಜನವರಿ 16ರಂದು ಹಮ್ಮಿಕೊಳ್ಳಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾವೇಶದಲ್ಲಿ ದ.ಕ. ಜಿಲ್ಲೆಯಿಂದ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಭಾಗವಹಿಸಲಿರುವರು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ತಿಳಿಸಿದ್ದಾರೆ.

ಮಹಿಳೆಯರಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಬೇಕು ಎಂದು ಪಕ್ಷದ ಮಹಿಳಾ ಘಟಕದ ವತಿಯಿಂದ ಪ್ರಿಯಾಂಕ ಗಾಂಧಿಯವರಿಗೆ ಒಕ್ಕೊರಲಿನ ಒತ್ತಾಯ ಮಾಡಲಾಗುವುದು. ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಹಿಳಾ ಕಲ್ಯಾಣಕ್ಕಾಗಿ ಈ ಬಾರಿ ಕಾಂಗ್ರೆಸ್ ನಿಂದ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಅವಕಾಶ ಸಿಗುವಂತಾಗಲು ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸದೃಢ ವ್ಯವಸ್ಥೆ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದೆ. ಈ ಬಗ್ಗೆ ಮಹಿಳೆಯರಿಂದಲೇ ಸಲಹೆ, ಅಭಿಪ್ರಾಯ ಪಡೆಯಲಾಗುತ್ತಿದೆ.

ಈ ಸಮಾವೇಶಕ್ಕೆ ದ.ಕ.ಜಿಲ್ಲೆಯ ಮಾಜಿ ಶಾಸಕಿ, ಟಿಕೆಟ್ ಆಕಾಂಕ್ಷಿಗಳು, ಪದಾಧಿಕಾರಿಗಳು ಸೇರಿದಂತೆ ಪಂಚಾಯಿತಿ ಹಾಗೂ ವಾರ್ಡ್ ನಾಯಕಿಯರು, ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲೆಟ್ ಪಿಂಟೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು