9:03 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

15/01/2023, 19:03

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಇದೇ ಮೊದಲ ಬಾರಿಗೆ ಕಾನೂನು ನೆರವು ಅಭಿರಕ್ಷಕರ (ಡಿಫೆನ್ಸ್ ಕೌನ್ಸೆಲ್) ಕಚೇರಿ ಕಾರ್ಯಾರಂಭ ಮಾಡಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜೆ. ವೀರಪ್ಪ ಕಾನೂನು ನೆರವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಭಿರಕ್ಷಕರ ಕಚೇರಿಯನ್ನು ಏಕಕಾಲಕ್ಕೆ ಲೋಕಾರ್ಪಣೆ ಮಾಡಿದರು.
ಮಂಗಳೂರಿನ ನ್ಯಾಯಾಲಯ ಸಂಕೀರ್ಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಜೋಷಿ ಅವರು ಕಚೇರಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.

ಮಂಗಳೂರಿನ ಹಿರಿಯ ನ್ಯಾಯವಾದಿ ವಾಸುದೇವ ಗೌಡ ಅವರು ಮುಖ್ಯ ಡಿಫೆನ್ಸ್ ಕೌನ್ಸೆಲ್ ಆಗಿ ಅಧಿಕಾರ ವಹಿಸಿಕೊಂಡರು. ಉಪ ಡಿಫೆನ್ಸ್ ಕೌನ್ಸೆಲ್ ಆಗಿ ಶುಕರಾಜ ಕೊಟ್ಟಾರಿ ಹಾಗೂ ಸಹಾಯಕ ಡಿಫೆನ್ಸ್ ಕೌನ್ಸೆಲ್ ಆಗಿ ಕೃಷ್ಣ ಅಧಿಕಾರ ಸ್ವೀಕರಿಸಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಜಿ. ಶೋಭಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ, ಕಾರ್ಯದರ್ಶಿ ಶ್ರೀಧರ ಎಣ್ಮಕಜೆ, ಹಿರಿಯ ವಕೀಲರಾದ ಇಬ್ರಾಹಿಂ ಹಾಗೂ ವಿವಿಧ ನ್ಯಾಯಾಧೀಶರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು