ಇತ್ತೀಚಿನ ಸುದ್ದಿ
ಮೂಡಿಗೆರೆ: ಪಿಕ್ನಿಕ್ ಗೆ ಹೋಗಿದ್ದ ಬಸ್ ಪಲ್ಟಿ; 5 ಮಂದಿ ವಿದ್ಯಾರ್ಥಿಗಳಿಗೆ ಗಾಯ, ಆಸ್ಪತ್ರೆಗೆ ದಾಖಲು
15/01/2023, 22:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಹಿಂತಿರುಗುತ್ತಿದ್ದಾಗ ಕಾಲೇಜು ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾಲೇಜ್ ವಾಹನ ಪಲ್ಟಿಯಾಗಿದೆ.
ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಹಿಂದಿರುಗುವಾಗ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಾಯಗೊಂಡ ಐವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಹರೀಶ್ ಪಿ.ಯು. ಕಾಲೇಜಿನ 10 ಮಂದಿ ವಿದ್ಯಾರ್ಥಿಗಳು ಇಂದು ದೇವರಮನೆ ಗುಡ್ಡಕ್ಕೆ ಪಿಕ್ನಿಕ್ ಹೋಗಿದ್ದರು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.