12:33 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಪಂ ಸಭೆ: ಮೂಲಭೂತ ಸೌಕರ್ಯಗಳಿಗೆ ಆಧ್ಯತೆ, ವಸತಿ ಯೋಜನೆಯಲ್ಲಿ ಪಾರದರ್ಶಕತೆಗೆ ಸೂಚನೆ

20/01/2023, 15:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterKarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಸಭೆ, ಜ19ರಂದು ಪಪಂ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳನ್ನು, ಸಾರ್ವಜನಿಕರಿಗೆ ಸಮರ್ಪಕವಾಗಿ ಒದಗಿಸಲು ಆಧ್ಯತೆ ನೀಡುವಂತೆ ಅದಿಕಾರಿಗೆ ಸದಸ್ಯರು ತಾಕೀತು ಮಾಡಿದರು. ವಸತಿ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳ ಅನುಷ್ಠಾನದಲ್ಲಿ, ಎಲ್ಲಾ ಹಂತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕಿದೆ. ಉತ್ತಮ ಗುಣ ಮಟ್ಟದಲ್ಲಿ ಮನೆಗಳನ್ನು ನಿರ್ಮಾಣ ಮಾಡುಂತೆ, ಅಗತ್ಯ ಕ್ರಮಕ್ಕಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸುಮಾರು 16ಕ್ಕೂ ಹೆಚ್ಚು ವಿಷಯಗಳಿಗೆ ಅನುಮೋದನೆ, ಕಾಮಗಾರಿಗಳಿಗೆ ಪ್ರಸ್ಥಾವನೆಗಳ ಕುರಿತು ಚರ್ಚಿಸಲಾಯಿತು. ಕುಡಿಯೋ ನೀರು ಸಮಸ್ಯೆ ಉಲ್ಬಣವಾಗದಂತೆ, ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗ್ರತೆ ವಹಿಸುವಂತೆ ಸರ್ವ ಸದಸ್ಯರು ಒತ್ತಾಯಿಸಿದರು. ಸಭೆಯಲ್ಲಿ ಅಧ್ಯಕ್ಷೆ ಎಮ್.ಶಾರದಾಬಾಯಿ ಅಧ್ಯಕ್ಷತೆಯಲ್ಲಿ ಜರುಗಿತು, ಉಪಧ್ಯಕ್ಷೆ ರೇಣುಕಾ, ಸ್ಥಾಯಿ ಸಮಿತಿ ಅಧ್ಯಕ್ಷ ಪೂರ್ಯಾನಾಯ್ಕ, ಮುಖ್ಯಾಧಿಕಾರಿ ಫಿರೋಜ್ ಖಾನ್ ವೇದಿಕಯಲ್ಲಿದ್ದರು. ಸರ್ವ ಹಾಗೂ ನಾಮ ನಿರ್ದೇಶಿತ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು