8:54 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

Mangalore | ವಿಮಾನ ಹಾರುವ ರನ್‌ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್‌ಎಫ್ ಸಿಬ್ಬಂದಿಗಳಿಂದ ಬಂಧನ

06/07/2021, 18:27

ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನರ್ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ 11ರ ವೇಳೆಗೆ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ‌ ರನ್ ವೇ ಕಾಮಗಾರಿ ನಡೆಯುತ್ತಿತ್ತು. ಆ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ಅಕ್ರಮವಾಗಿ ಪ್ರವೇಶಿಸಿರುವುದು ಕಂಡು ಬಂತು. ತಕ್ಷಣ ಆತನನ್ನು ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಬಜಪೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅನಧಿಕೃತವಾಗಿ ನುಗ್ಗಿದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಪಶ್ಚಿಮ ಬಂಗಾಲದ ಮುರ್ಸಿದಾಬಾದ್ ನ ಬಧುಹಾ ಗ್ರಾಮ ದ ನಿವಾಸಿ ರಾಕೇಶ್ ಎಂದು ಹೇಳಿಕೊಂಡಿದ್ದಾನೆ. ಈತ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ತನ್ನ ಜೊತೆ ಇದ್ದ ಲಾರಿ ಡ್ರೈವರ್ ತನಗೆ ಸಂಬಳ ನೀಡದೆ ಇಲ್ಲೇ ಸಮೀಪದಲ್ಲಿ ಬಿಟ್ಟು ಹೋಗಿದ್ದು ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು