12:16 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಕಪಿತಾನಿಯೋ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 2 ದಿನದ ಕಲಿಕಾ ಹಬ್ಬಕ್ಕೆ ಚಾಲನೆ

25/01/2023, 11:19

ಮಂಗಳೂರು(reporterkarnataka.com): ನಗರದ ನಾಗೂರಿ ಸಮೀಪದ ಕಪಿತಾನಿಯೋ
ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 2 ದಿನದ ಕಲಿಕಾ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, ಉತ್ತಮ ಶಿಕ್ಷಣ ದಿಂದ ವಿಶ್ವದಲ್ಲೇ ನಮ್ಮದೇಶ ಮುಂದಿದೆ. ಜೀವನದ ಮೊದಲ ಗುರು ಶಿಕ್ಷಕರು. ಆ ಗುರುಗಳು ಮಕ್ಕಳನ್ನು ಉತ್ತಮ ಪ್ರಜೆಯಾಗಿ ಕೆತ್ತಿ ಸಮಾಜಕ್ಕೆ ನೀಡುತ್ತಾರೆ. ಎರಡು ದಿನಗಳ ಕಲಿಕಾ ಹಬ್ಬದ ಪ್ರಯೋಜನ ಪಡೆಯಿರಿ ಎಂದರು.

ಈ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯತ್ಯೇತರ ವಿಷಯಗಳನ್ನು ಕಲಿಯಬೇಕಾಗಿದೆ. ಒನ್ಲೈನ್ ಶಾಪಿಂಗ್ ಗಳ ಬಗ್ಗೆ ಮಾಹಿತಿಯನ್ನೂ ಈ ಶಿಕ್ಷಕರರು ನೀಡಲಿದ್ದಾರೆ ಎಂದು ಅವರು ನುಡಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಮಾತನಾಡಿ, ಈ ಕಲಿಕಾ ಹಬ್ಬದ ಹಿಂದಿನ ತಯಾರಿಯ ಶಿಕ್ಷಕರ ಶ್ರಮ ಅಭೂತ ಪೂರ್ವ. ಮಕ್ಕಳ ಬೆಳವಣಿಗೆಯ ಹಿಂದಿನ ನೆರಳು ಶಿಕ್ಷಕರು ಎಂದು ಕಥೆಯ ಮೂಲಕ ಮಕ್ಕಳಿಗೆ ವಿವರಿಸಿದರು.


ವಿಶ್ವ ಹಿಂದೂ ಪರಿಷತ್ ನ ಚರಣ್ ಪಂಪ್ವೆಲ್, ಇಸಿಒ ಸುಷ್ಮಾ,ಬಿ. ಆರ್.ಬಿ. ತಾಸಿನ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ. ಜಿ, ಸರಕಾರಿ ಪ್ರೌಢಶಾಲಾ ಮುಖ್ಯ್ಯೋಪಾಧ್ಯಯ ಜಗದೀಶ್, ಶಿಕ್ಷಕ ವೃಂದ ಮತ್ತಿರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು