6:03 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಕಿಂಗ್ ಆಗೋಲ್ಲ, ನಾನು ಕಿಂಗ್ ಮೇಕರ್ ಆಗ್ತೀನಿ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

25/01/2023, 18:58

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಾನು ಕಿಂಗ್ ಆಗೊಲ್ಲ. ನಾನು ಕಿಂಗ್ ಮೇಕರ್ ಆಗುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.
ಅಥಣಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಒಂದು ವೇಳೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದಿದ್ದರೆ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಒಲವು ಹೊಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಯಾರು ಒಳ್ಳೆಯ ಮೇಕಪ್ ಹಾಕಿಕೊಂಡು ಬರುತ್ತಾರೆ ನೋಡೋಣ ಎಂದು ಚಟಾಕಿ ಹಾರಿಸಿದರು.

ರಾಜ್ಯ ಸಾರ್ವತ್ರಿಕ ಚುನಾವಣೆ ನಂತರ ನಮ್ಮ ನಡೆ ಪ್ರಕಟಿಸುತ್ತೇವೆ ಎಂದರು.
ಕಾಂಗ್ರೆಸ್ ಉಚಿತ ವಿದ್ಯುತ್ ನೀಡುವ ಘೋಷಣೆ ಕುರಿತು ಮಾತನಾಡಿದ ಇಬ್ರಾಹಿಂ, ನೀರು ಕೊಡದವರು ಉಚಿತವಾಗಿ ಏನಾದರೂ ನೀಡುತ್ತಾರಾ? ಎಲ್ಲವೂ ಸುಳ್ಳು ಹೇಳುತ್ತಾರೆ. ಆದರೆ ಕುಮಾರಸ್ವಾಮಿ ಹೇಳಿದಂತೆ ನಡೆಯುತ್ತಾರೆ.

ಹೇಳಿದಂತೆ ನಡೆಯುವುದು ಜೆಡಿಎಸ್ ಪಕ್ಷ ಮಾತ್ರ ಎಂದರು.
ನಾವು ಸ್ಪಷ್ಟವಾಗಿ ಬಹುಮತ ಪಡೆಯುತ್ತೇವೆ..
ನುಡಿದಂತೆ ನಡೆಯುತ್ತೇವೆ. ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್ ಅಭ್ಯರ್ಥಿ ಲಿಸ್ಟ್ ಬಿಡುಗಡೆ ಮಾಡಿದೆ. ಈಗಾಗಲೇ ನಾವು 93 ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ್ದೇವೆ. ಬಿಜೆಪಿ ಅವರು ಒಂದು ಅಭ್ಯರ್ಥಿ ಹೆಸರು ಘೋಷಣೆ ಮಾಡಲಿ‌ ನೋಡೋಣ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಿಂದ ಸ್ವರ್ಧೆ ಮಾಡುತ್ತಾರೆ?
ಜಗದೀಶ್ ಶೆಟ್ಟರ್ ಎಲ್ಲಿಂದ ಸ್ವರ್ಧಿಸುತ್ತಾರೆ ಎಂಬುದು ಮೊದಲು ಹೇಳಲಿ ಎಂದು ಅವರು ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು