4:19 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ ಶಿರಸಿಯಲ್ಲಿ ಇಂದು ಸೈಕಲ್ ಏರಲಿರುವ ಕೆಪಿಸಿಸಿ ಅಧ್ಯಕ್ಷರು !

07/07/2021, 11:20

ಕಾರವಾರ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜು.7ರಂದು ಶಿರಸಿಗೆ ಆಗಮಿಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ತೈಲ ಬೆಲೆಯೇರಿಕೆ ವಿರುದ್ಧ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಬೆಳಗ್ಗೆ 11 ಗಂಟೆಗೆ ನಗರದ ಮಾರಿಕಾಂಬಾ ದೇವಾಲಯದಿಂದ ಜಾಥಾ ಆರಂಭವಾಗಲಿದೆ. ನಂತರದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ.

ಸಂಜೆ 4 ಗಂಟೆಗೆ ನಗರದ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ದಿ. ದೀಪಕ ಹೊನ್ನಾವರ ಅಭಿಮಾನಿ ಬಳಗದ ವತಿಯಿಂದ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ  ಟೆಂಪೋ ಚಾಲಕರು ಮತ್ತು ಸಹಾಯಕರು ಹಾಗೂ ಆಟೋ ಚಾಲಕರಿಗೆ ಆಹಾರವಸ್ತುಗಳ ಕಿಟ್ ವಿತರಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವಿ. ದೇಶಪಾಂಡೆ, ವಿಧಾನಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಜಿಲ್ಲಾ ಯುವ

ಕಾಂಗ್ರೆಸ್ ಅಧ್ಯಕ್ಷ ಸಂತೋಷ ಶೆಟ್ಟಿ ಸೇರಿದಂತೆ ಪಕ್ಷದ ಹಿರಿಕಿರಿಯ ನಾಯಕರು ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು