2:30 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಅಂತರ್ ಕಾಲೇಜು ಸ್ಪರ್ಧೆ

26/01/2023, 20:31

ಮಂಗಳೂರು(reporterkarnataka.com): ಸಂತ ಅಲೋಶಿಯಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೆಡ್ ಕ್ರಾಸ್ ಸಹಯೋಗದಲ್ಲಿ ಇನೋಯ ಇಂಟರ್ ಕಾಲೇಜು ಸ್ಪರ್ಧೆ ಕಾಲೇಜಿನ ಆವರಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿಕಟ ಪೂರ್ವ ರಾ. ಸೇ ಯೋ ರಾಜ್ಯ ಅಧಿಕಾರಿ ಗಣನಾಥ ಶೆಟ್ಟಿ ಎಕ್ಕಾರ್ ಮಾತನಾಡಿ, ಈ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಸವಿ ನೆನಪನ್ನು ನೀಡಿದೆ ಎಂದರು.




ಸಂಸ್ಕೃತಿಕ ಚಟುವಟಿಕೆಗಳು ಮಾನಸಿಕ ನೆಮ್ಮದಿಯನ್ನು ನೀಡುತ್ತದೆ. ಆದ್ದರಿಂದ ಹೆಚ್ಚಿನ ಪ್ರಾಮುಖ್ಯತೆಯನ್ನು ಇಂತಹ ಉತ್ತಮ ಕಾರ್ಯಕ್ರಮಗಳಿಗೆ ಪ್ರಾಮುಖ್ಯತೆಯನ್ನು ನೀಡಬೇಕಾಗಿದೆ. ಸಮಾಜದಲ್ಲಗುವ ಅಹಿತಕರ ಘಟನೆಗಳಿಂದ ದೂರವಿರಲು, ಜಾತಿ ಮತ ಬೇಧ ಮರೆತು ಮನಸ್ಸನ್ನು ಕಟ್ಟವ ಕೆಲಸಗಳಿಗೆ ಈ ಕಾರ್ಯಕ್ರಮಗಳು ಅವಶ್ಯ. ಇದರಿಂದ ವಿದ್ಯಾರ್ಥಿಗಳ ಜೀವನ ಕೌಶಲ್ಯ ಹೆಚ್ಚುತ್ತದೆ. ಸ್ಪರ್ಧೆಗಳಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗಿದೆ. ಬಹುಮಾನ ಬರಲಿ ಬರದೇ ಇರಲಿ, ಸ್ಪರ್ಧೆಯು ಮನೋಭಾವನೆ ಮುಖ್ಯ ಎಂದು ವಿದ್ಯಾರ್ಥಿಗಳಿಗೆಗಳಿಗೆ ಮನವರಿಕೆ ಮಾಡಿದರು.


ಮುಖ್ಯ ಅತಿಥಿ ಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ. ಕೆ. ಎ. ಮಾತನಾಡಿ,ನಮ್ಮ ಜೀವನದಲ್ಲಿ ಪಠ್ಯ ಪೂರಕವಾಗಿ ನಮ್ಮನ್ನು ನಾವು ತೊಡಗಿಸಿಕೊಂಡಾಗ ನಾವು ಸಮಾಜದ ಮುಂಚೂಣಿಗೆ ಬರುತ್ತೇವೆ. ಕಾಲೇಜು ಮಟ್ಟದಲ್ಲಿಯೇ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ಮುಂದೆ ಜೀವನದಲ್ಲಿ ಸ್ಪರ್ಧಿಸಲು ಸಾಧ್ಯ. ವಿಧೇಯತೆ, ಗುರುಗಳಿಗೆ ಗೌರವಿಸೋ ಮನೋಭಾವನೆ ಎಲ್ಲಿ ಇರುತ್ತೋ ಅಲ್ಲಿ ಪ್ರತಿಭೆಗಳು ಅನಾವರಣಗೊಳ್ಳುತ್ತದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರವೀಣ್ ಮಾರ್ಟೀಸ್ ಮಾತನಾಡಿ, ನಿಮ್ಮಲ್ಲಿ ಮನುಷತ್ವ ಮುಖ್ಯ. ಜಾತಿ ಧರ್ಮ ಅನೇಕ. ಅದನ್ನು ಹೊರತುಪಡಿಸಿ, ನಾವೆಲ್ಲರೂ ಒಂದೇ ಎಂದು ಭಾವಿಸಿ. ಇವತ್ತಿನ ದಿನವನ್ನು ಸಂತೋಷದಿಂದ ಆನಂದಿಸಿ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ರಾ.ಸೆ.ಯೋ ಯೋಜನಾಧಿಕಾರಿ ಆಲ್ವಿನ್, ಕ್ಯಾರೆಲ್ ಪಿರೇರಾ, ರೆಡ್ ಕ್ರಾಸ್ ಕವಿತಾ ಬೋಳಾರ್ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು