2:23 PM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಇಂದು ವಿಸ್ತರಣೆ: ಸದಾನಂದ ಗೌಡರಿಗೆ ಕೊಕ್ 

07/07/2021, 15:29

ನವದೆಹಲಿ(reporterkarnataka news):

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂದಿಯನ್ನುbಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದ್ದು, ಅವರೂ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೋದಿ ಅವರು

ನಡೆಯುತ್ತಿರುವ ಮೊದಲ ಸಂಪುಟ ಪುನರ್ರಚನೆ ಇದಾಗಿದೆ. ಹಲವು ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊಸಬರಿಗೆ ದಾರಿ ಮಾಡಿಕೊಟ್ಟಿದ್ದಾರೆ.

ಬಿಜೆಪಿ ಸೇರಿರುವ ಮಾಜಿ ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಸಚಿವ ಸ್ಥಾನ ಖಚಿತ ಎನ್ನಲಾಗುತ್ತಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ, ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸಂಸದ ಭೂಪೇಂದ್ರ ಯಾದವ್, ಮತ್ತು ಉತ್ತರ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ಬಿ ಎಲ್ ವರ್ಮಾ ಅವರಿಗೆ ಸಂಪುಟದಲ್ಲಿ ಸ್ಥಾನ ಖಚಿತಪಡಿಸಿ ಕರೆಗಳು ಬಂದಿವೆ ಎನ್ನಲಾಗುತ್ತಿದೆ.

ಕರ್ನಾಟಕದ ಸಂಸದೆ ಶೋಭಾ ಕರಂದ್ಲಾಜೆ, ಸಿರ್ಸಾ ಸಂಸದೆ ಸುನೀತಾ ದುಗ್ಗರ್, ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಮತ್ತು ಮಹಾರಾಷ್ಟ್ರ ಸಂಸದೆಯರಾದ ಹಿನಾ ಗವಿತ್ ಮತ್ತು ಪ್ರೀತಂ ಮುಂಡೆ ಸೇರಿದಂತೆ ಮಹಿಳೆರಿಗೆ ಸಂಪುಟ ವಿಸ್ತರಣೆಯಲ್ಲಿ ಪ್ರಾಮುಖ್ಯತೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು