ಇತ್ತೀಚಿನ ಸುದ್ದಿ
ಆರೋಗ್ಯ ಸಚಿವರ ಎದೆ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ದಾಖಲು; ಎಎಸ್ ಐ ದುಷ್ಕೃತ್ಯ
29/01/2023, 16:43

ಹೊಸದಿಲ್ಲಿ(reporterkarnataka.com): ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಮೇಲೆ ಭಾನುವಾರ ಗುಂಡಿನ ದಾಳಿ ನಡೆಸಲಾಗಿದೆ.
ಝಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಸಮೀಪ ಈ ದಾಳಿ ನಡೆದಿದೆ.
ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡವ ಕಿಶೋರ್ ದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ
ಸಚಿವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಗುಂಡೇಟು ಎದೆಗೆ ತಗುಲಿದ್ದು, ಸಚಿವರು ತೀವ್ರ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿ ಸಚಿವರ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಅವರನ್ನು ವಿಮಾನದಲ್ಲಿ ಭುವನೇಶ್ವರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ದಾಸ್ ಅವರು ಸಚಿವರ ಮೇಲೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಸ್ಥಳೀಯರು ಬಂಧಿಸಿದ್ದು, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಬ್ರಜರಾಜನಗರ ಉಪವಿಭಾಗದ ಪೊಲೀಸ್ ಅಧಿಕಾರಿ ಗುಪ್ತೇಶ್ವರ ಭೋಯ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ದಾಳಿಯ ಹಿಂದಿನ ಉದ್ದೇಶಗಳು ಇನ್ನೂ ತಿಳಿದು ಬಂದಿಲ್ಲ.