8:00 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಾಧ್ಯಮಗಳ ಮೇಲಿನ ಸಂಶಯ ನಿವಾರಣೆ ಅಗತ್ಯ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

30/01/2023, 13:49

ಬೆಂಗಳೂರು(reporterkarnataka.com): ಇಂದಿನ ಪರಿಸ್ಥಿತಿಯಲ್ಲಿ ಮಾಧ್ಯಮ ಕ್ಷೇತ್ರದ ಮೇಲೂ ಸಂಶಯವಿದ್ದು, ಇದನ್ನು ನಿವಾರಿಸಲು ಪತ್ರಿಕಾ ರಂಗ ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.

ಚಾಮರಾಜಪೇಟೆಯ ಸಾಹಿತ್ಯ ಪರಿಷತ್ತಿನಲ್ಲಿ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್‍ನಿಂದ ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಬ್ಯಾಗ್, ಕಲಿಕಾ ಸಾಮಗ್ರಿ ವಿತರಿಸಿ, ಶಿಕ್ಷಕ ಸೇವಾ ರತ್ನ, ಪೋಷಕ ಕಲಾ ಸೇವಾ ರತ್ನ ಮಾಧ್ಯಮ ಸೇವಾ ರತ್ನ ಪ್ರಶಸ್ತಿ, ಹಾಗೂ ಛಾಯಾ ಸೇವಾ ರತ್ನ, ಪ್ರದಾನ ಮಾಡಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರ ಅಗಾಧವಾಗಿ ಬೆಳೆಯುತ್ತಿದ್ದು, ಮುದ್ರಣ, ವಿದ್ಯುನ್ಮಾನ, ಡಿಜಿಟಲ್ ಎಂಬ ವಲಯಗಳಾಗಿವೆ. ಆದರೆ ಎಲ್ಲಾ ಮಾಧ್ಯಮಗಳ ಒಟ್ಟಾರೆ ಆಶಯ ಸಮಾಜದಲ್ಲಿ ಮೌಲ್ಯಗಳನ್ನು ನಿರ್ಮಿಸುವ, ಸೌಹಾರ್ದತೆಯನ್ನು ಮೂಡಿಸುವ ಕೆಲಸ ಮಾಡಬೇಕು ಎಂದು ನುಡಿದರು.

ಮಾಧ್ಯಮ ರಂಗ ಸಂವಿಧಾನದಿಂದ ಸೃಷ್ಟಿಯಾದ ಸಂಸ್ಥೆಯಲ್ಲ, ಆದರೆ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗವನ್ನು ಸುಸ್ಥಿತಿಯಲ್ಲಿಡಲು ಮಾಧ್ಯಮಗಳ ಪಾತ್ರ ಅನನ್ಯವಾಗಿದೆ. ಆಮಿಷಗಳಿಗೆ ಒಳಗಾಗಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರಬಾರದು. ಡಿಜಿಟಲ್ ಮಾಧ್ಯಮದಲ್ಲೂ ಸಾಕಷ್ಟು ಸಮಸ್ಯೆಗಳಿದ್ದು, ಇವುಗಳನ್ನು ನಿವಾರಿಸುವ ಕೆಲಸ ಆಗಬೇಕು. ಹುಟ್ಟುವಾಗ ಮುನುಷ್ಯನಾಗದಿದ್ದರೂ ಬದುಕಿ ಬಾಳಿ ಸಾಯುವಾಗಲಾದರೂ ಮಾನವೀಯತೆಯನ್ನು ಅಳವಡಿಸಿಕೊಳ್ಳಬೇಕು. ಮಾಧ್ಯಮಗಳು ಕೂಡ ರಚನಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದರು.

ವಿಜಯ ಕರ್ನಾಟಕ ಪತ್ರಿಕೆಯ ಆನ್ಲೈನ್ ಎಡಿಟರ್ ಪ್ರಸಾದ್ ನಾಯಕ್ ಮಾತನಾಡಿ, ಡಿಜಿಟಲ್ ಮಾಧ್ಯಮ ನಿರೀಕ್ಷೆಗೂ ಮೀರಿ ಬೆಳವಣಿಗೆಯಾಗುತ್ತಿದ್ದು, ಇದೇ ರೀತಿ ಸವಾಲುಗಳು ಕೂಡ ಹೆಚ್ಚಾಗುತ್ತಿವೆ. ಆದರೆ ಡಿಜಿಟಲ್ ಮಾಧ್ಯಮಕ್ಕೆ ಇನ್ನೂ ಮಾನ್ಯತೆ ಸಿಕ್ಕಿಲ್ಲ. ಡಿಜಿಟಲ್ ಮಾಧ್ಯಮ ನೀತಿಯಲ್ಲಿ ಸುಧಾರಣೆಯಾಗಬೇಕಾಗಿದ್ದು, ಅಗತ್ಯ ನಿಯಂತ್ರಣ ವ್ಯವಸ್ಥೆಯೂ ಬೇಕಾಗಿದೆ ಎಂದರು.

ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿ, ಡಿಜಿಟಲ್ ಮಾಧ್ಯಮವನ್ನು ಬಳಸಿಕೊಂಡು ನಟ-ನಟಿಯರ ನಡುವೆ ಜಟಾಪಟಿ ತಂದಿಡುವ, ಸಾಮಾಜಿಕ ಮಾಧ್ಯಮಗಳಲ್ಲಿ ಕಿಚ್ಚು ಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ವಿದೇಶಗಳಲ್ಲಿ ಕುಳಿತು ಇಂತಹ ಸಂಚು, ಷಡ್ಯಂತ್ರ ರೂಪಿಸಲಾಗುತ್ತಿದ್ದು, ರೀತಿಯ ಸಮಸ್ಯೆಗಳ ನಿವಾರಣೆಗೆ ಡಿಜಿಟಲ್ ಮಾಧ್ಯಮ ವಲಯ ಮುಂದಾಗಬೇಕು ಎಂದು ಹೇಳಿದರು.
ಚಲನಚಿತ್ರ ನಟಿ ಅನು ಅಯ್ಯಪ್ಪ, ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, ಮಹಿಳಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪದ್ಮಾ ಶಿವಮೊಗ್ಗ, ವಿಶ್ವನಾಥ್ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು