11:24 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಅಥಣಿಯ ಹುಲಗಬಾಳಿ ಗ್ರಾಮ: 10 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗ ಶಾಸಕ ಕುಮಠಳ್ಳಿ ಚಾಲನೆ

30/01/2023, 14:28

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ‌ ಹುಲಗಬಾಳಿ ಗ್ರಾಮದಲ್ಲಿ‌ ಇದುವರೆಗೆ ಕನಿಷ್ಠ 10 ಕೋಟಿ ರೂ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದ್ದೆನೆ. ಬರುವ ದಿನಮಾನದಲ್ಲಿ ಇನ್ನಷ್ಟು ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡು ಹುಲಗಬಾಳಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿಸುವೆ ಎಂದು ಅಥಣಿ ಶಾಸಕ ಹಾಗೂ ಕರ್ನಾಟಕ ಅಭಿವೃದ್ದಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ ಹೇಳಿದರು.

ಅವರು ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಸುಮಾರು 2 ಕೋಟಿ 50 ಲಕ್ಷ ರೂ ವೆಚ್ಚದಲ್ಲಿ ಅಥಣಿ ಕ್ಲಬ್ ನಿಂದ ಹುಲಗಬಾಳಿ ಕೂಡು ರಸ್ತೆಯವರೆಗಿನ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ 5 ಲಕ್ಷ ರೂ ಅನುದಾನದಲ್ಲಿ ಯಲ್ಲಮ್ಮದೇವಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡುತ್ತಾ ಪ್ರತಿಯೊಂದು ಗ್ರಾಮದ ಮೂಲಭೂತ ಅವಶ್ಯಕತೆಗಳನ್ನು ಪೂರೈಸಿ ಅವರು ಸೇವೆ ಮಾಡಲು ಕೊಟ್ಟ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳುತ್ತೆನೆ ಎಂದರು.

ಈ ವೇಳೆ ಗುತ್ತಿಗೆದಾರ ಸುನೀಲ ಚವ್ಹಾಣ, ಗ್ರಾಮಸ್ಥರಾದ ಭೀರಪ್ಪ ಶೇಡಬಾಳೆ, ದೊಂಡಿಬಾ ದೈಪೊಡೆ, ಶಿವಾಜಿ ಶಿಂಧೆ, ಪ್ರಕಾಶ ಕಾಂಬಳೆ, ರವಿ ಪಾಟೀಲ, ಶಾಂತಿನಾಥ ತೇರದಾಳ, ಕುಮಾರ ಕಾಂಬಳೆ, ಗೋವಿಂದ ಸೋಲಂಕರ, ಮಾರುತಿ ಹರಾಳೆ, ಅರುಣಗೌಡ ಪಾಟೀಲ, ಬೀರಪ್ಪ ಕಾಂಬಳೆ ಮುಖಂಡರಾದ ನಿಂಗಪ್ಪ ನಂದೇಶ್ವರ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು