3:37 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ವಿಎಚ್ ಪಿ ನಾಯಕ ಶರಣ್ ಪಂಪ್ ವೆಲ್ ಹೇಳಿಕೆ ಆಘಾತಕಾರಿ: ಯುವ ಜೆಡಿಎಸ್ ದ.ಕ. ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ

30/01/2023, 18:36

ಮಂಗಳೂರು(reporterkarnataka.com): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತೀಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ಮಾಡಿದ್ದೇವೆ ಎಂದು ವಿಎಚ್ ಪಿ ನಾಯಕ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆ ನಾಗರೀಕ ಸಮಾಜಕ್ಕೆ ಆಘಾತಕಾರಿ ವಿಚಾರ ಎಂದು ದ.ಕ. ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಭಯ ಹುಟ್ಟಿಸುವಂತಹ ಹೇಳಿಕೆಗಳನ್ನು ನೀಡಿದ ವ್ಯಕ್ತಿಯ ವಿರುದ್ದ ಪೊಲೀಸ್ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಾಚಿಕೆಗೇಡಿನ ಸಂಗತಿ ಆಗಿದೆ. ಇವರ ಇಂತಹ ಹೇಳಿಕೆಗಳು ನಾಗರಿಕ ಸಮಾಜ ತಲೆ ಬಾಗಿಸುವಂತಹ ಕೆಲಸವಾಗಿದೆ ಎಂದರು.
ಶರಣ್ ಪಂಪ್ ವೆಲ್ ಅವರ ಹೇಳಿಕೆ ಸಮಾಜದಲ್ಲಿ ಹತ್ಯೆ ಹಾಗೂ ಘರ್ಷಣೆಗೆ ಪ್ರಚೋದನೆ ನೀಡುವಂತಿದ್ದು, ಅಮಾಯಕ ಯುವಕರನ್ನು ಇಂತಹ ಸಮಾಜದ್ರೋಹಿ ಕೆಲಸಗಳಿಗೆ ಬಳಸಿಕೊಂಡು ಚುನಾವಣೆ ಹತ್ತಿರವಿರುವ ಸಮಯದಲ್ಲಿ ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡಲು ಕಾರಣವಾಗುತ್ತಿದೆ. ಇದಕ್ಕೆ ಅವಕಾಶ ನೀಡದೆ ಇಂತಹ ಹೇಳಿಕೆ ನೀಡಿರುವ ಶರಣ್ ಪಂಪ್ವೆಲ್ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಹಿಂದೂ ಮುಖಂಡನಾಗಿ ಇಂತಹ ಹೇಳಿಕೆ ನ್ಯಾಯ ವ್ಯವಸ್ಥೆಗೆ ಎಸೆದಿರುವ ಸವಾಲು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿರುವಂತೆ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬ ಹೇಳಿಕೆಗೆ ನೇರವಾಗಿ ಬೆಂಬಲಿಸಿದಂತಾಗಿದೆ. ಅಮಾಯಕರನ್ನು ಕೊಲ್ಲುವುದೇ ಇವರ ಹಿಡನ್ ಅಜೆಂಡಾ ಆಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು