4:28 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಯುವಕನ ಶವ ಪತ್ತೆ: ಬೆಂಗಳೂರಿನ ಯುವಕನ ಅಪಹರಿಸಿ ಕೊಲೆ; ಪ್ರೇಮ ಪ್ರಕರಣ ಹತ್ಯೆಗೆ ಕಾರಣ

01/02/2023, 15:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka agnail.com

ಅಪಹರಣಕ್ಕೊಳಗಾಗಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಬೆಂಗಳೂರಿನ ಯುವಕನ ಮೃತದೇಹ ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದ ಕಂದಕದಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನು ಬೆಂಗಳೂರಿಗೆ ಸಾಗಿಸಲಾಗಿದೆ.
ಕೊಲೆಗೀಡಾದ ಯುವಕನನ್ನು ಬೆಂಗಳೂರಿನ ಮತ್ರಿ ಕೆರೆ ನಿವಾಸಿ ಗೋವಿಂದರಾಜು(19) ಎಂದು ಗುರುತಿಸಲಾಗಿದೆ. ಗೋವಿಂದರಾಜು ಸಂಬಂಧಿಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


ಗೋವಿಂದರಾಜು ಅವರನ್ನು ಬೆಂಗಳೂರಿನಿಂದ ಸಂಬಂಧಿಕರೇ ಅಪಹರಣ ನಡೆಸಿದ್ದರು. ಈ ಕುರಿತು ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗೋವಿಂದರಾಜುಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಅಪಹರಣಕಾರರು ಗೋವಿಂದರಾಜು ಅವರನ್ನು ಕೊಲೆ ಮಾಡಿ ಮೃತದೇಹವನ್ನು ಚಾರ್ಮಾಡಿ ಘಾಟಿಯ ಪ್ರಪಾತಕ್ಕೆ ಎಸೆದಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನ ಚಾರ್ಮಾಡಿ ಘಾಟ್ಗೆ ಯಶವಂತಪುರ ಪೊಲೀಸರು ಕರೆದು ತಂದಿದ್ದರು‌.

ಏನಿದು ಪ್ರಕರಣ?: ಕೊಲೆಯಾದ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತೀಸಿದ್ದ. ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್, ಭರತ್ ಹಾಗೂ ಮತ್ತಿಬ್ಬರು ಆರೋಪಿಗಳು ಕಳೆದ ಸೋಮವಾರ ಮತ್ತಿಕೆರೆಯಿಂದ ಗೋವಿಂದರಾಜನನ್ನು ಅಪಹರಿಸಿ ರಾಜ್ ಗೋಪಾಲ್ ನಗರದ ಅಂದರಳ್ಳಿಯಲ್ಲಿ ಕೊಲೆ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ವಾಹನದಲ್ಲಿ ದೇಹ ತಂದು ಬಿಸಾಕಿ ಪರಾರಿಯಾಗಿದ್ದರು. ಕುಟುಂಬದವರು ಗೋವಿಂದರಾಜು ಕಾಣೆಯಾಗಿರುವ ಬಗ್ಗೆ ಯಶವಂತಪುರ ಠಾಣೆಗೆ ದೂರು ನೀಡಿದ್ದರು. ಕುಟುಂಬದವರಿಗೆ ಅನಿಲ್ ಕುಮಾರ್ ಮೇಲೆ ಅನುಮಾನವಿದ್ದರಿಂದ ಪೊಲೀಸರು ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಭರತ್ ಮತ್ತಿತರ ಇಬ್ಬರು ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದು ಬುಧವಾರ ಆರೋಪಿಗಳನ್ನು ಚಾರ್ಮಾಡಿ ಘಾಟಿಗೆ ಕರೆ ತಂದು ಯಶವಂತಪುರ ಠಾಣೆಯ ಸಬ್ ಇನ್ ಸ್ಪೆಕ್ಟರ್ ಮಹೇಶ್ ಅವರ ತಂಡ ಸ್ಥಳೀಯ ಸಮಾಜ ಸೇವಕರ ಜತೆ ಸೇರಿ ಮೃತದೇಹವನ್ನು ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು