11:58 AM Wednesday27 - November 2024
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ನಿಧಿ: 2 ಕೋಟಿಯಿಂದ ಕನಿಷ್ಢ 10 ಕೋಟಿಗೆ ಹೆಚ್ಚಿಸಲು ಸಿಎಂಗೆ ಆಗ್ರಹ

02/02/2023, 14:34

ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಶಾಸಕರುಗಳ ಪ್ರದೇಶಾಭಿವೃದ್ಧಿ ನಿಧಿಗೆ ನೀಡಲಾಗುತ್ತಿರುವ 2 ಕೋಟಿ ಅನುದಾನವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರುಗಳಿಗೆ ಬಿಡುಗಡೆ ಮಾಡುತ್ತಿರುವ ಕ್ಷೇತ್ರಾಭಿವೃದ್ಧಿ ನಿಧಿಯನ್ನು 2 ಕೋಟಿಯಿಂದ 25 ಕೋಟಿಗಳಿಗೆ ಹೆಚ್ಚಿಸುವಂತೆ ಸರಕಾರವರವನ್ನು ಒತ್ತಾಯಿಸಿದ್ದರು. ಪ್ರತಿಯೊಬ್ಬ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ 350 ರಿಂದ 400 ಗ್ರಾಮ ಪಂಚಾಯಿತಿಗಳು ಬರುತ್ತಿದ್ದು,ತಾವುಗಳು ಪ್ರವಾಸ ಮಾಡುವಂತಹ ಸಮಯದಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಶಾಲಾ ಕೊಠಡಿ, ರಸ್ತೆ ಮತ್ತು ಚರಂಡಿ ಕಾಮಗಾರಿ, ವಿದ್ಯುತ್ ದೀಪಗಳು, ಕುಡಿಯುವ ನೀರು ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸುತ್ತಿರುತ್ತಾರೆ. ಆದರೆ ಸರ್ಕಾರ ಪ್ರತಿಯೊಬ್ಬ ಶಾಸಕರುಗಳಿಗೆ ಬಿಡುಗಡೆ ಮಾಡುವಂತಹ 2 ಕೋಟಿಗಳ ಕ್ಷೇತ್ರಾಭಿವೃದ್ಧಿ ನಿಧಿ ಯಾವುದಕ್ಕೂ ಸಾಲದ್ದಾಗಿದ್ದು, ಈ ಮೊತ್ತದಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಈ ಸಂಬಂಧವಾಗಿ ಕ್ಷೇತ್ರಾಭಿವೃದ್ಧಿ ನಿಧಿಯನ್ನು ಹೆಚ್ಚಿಸುವಂತೆ ಹಲವು ಬಾರಿ ಮನವಿ ಮಾಡಿರುವುದಾಗಿ ಶಾಸಕರುಗಳು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಎಲ್ಲಾ 25 ಜನ
ಜನಪ್ರತಿನಿಧಿಗಳು ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದು ಗ್ರಾಮಗಳ ಜೊತೆ ನಮ್ಮ ಹೆಚ್ಚಿನ ಒಡನಾಟ ಇರುವುದರಿಂದ ಜನರ ಮೂಲಭೂತ ಆವಶ್ಯಕತೆಗಳನ್ನು ಈಡೇರಿಸುವ ಬಗ್ಗೆ ನಾವು ಹೆಚ್ಚು ಗಮನಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಸಿರುತ್ತಾರೆ.

ಆದ ಕಾರಣ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳಿಗೆ ಸೀಮಿತವಾಗಿ ಈಗ ನೀಡುತ್ತಿರುವ ಕ್ಷೇತ್ರಾಭಿವೃದ್ದಿ 2 ಕೋಟಿ ಅನುದಾನವನ್ನು ಕನಿಷ್ಠ 10 ಕೋಟಿಗಳಿಗೆ ಹೆಚ್ಚಿಸುವ ಬಗ್ಗೆ ಈ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಶಿಫಾರಸ್ಸು ಮಾಡುವಂತೆ ಸಚಿವರು ಹಾಗೂ ವಿಧಾನ ಪರಿಷತ್ತಿನ ¸ ಸಭಾ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮನವಿ ಮಾಡಿದ್ದಾರೆ.
ಶಾಸಕರುಗಳಾದ ಮಂಜುನಾಥ ಭಂಡಾರಿ, ದಿನೇಶ್ ಗೂಳಿಗೌಡ, ಎಸ್. ರವಿ, ಶರಣ್ ಗೌಡ ಪಾಟೀಲ್,ಸುನೀಲ್ ಗೌಡ ಪಾಟೀಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು