3:40 AM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಕಾರಿಗೆ ಬೆಂಕಿ: ತುಂಬು ಗರ್ಭಿಣಿ ಪತ್ನಿ ಹಾಗೂ ಪತಿ ಸಜೀವ ದಹನ; ಹೆರಿಗೆ ಆಸ್ಪತ್ರೆಗೆ ಹೋಗುತ್ತಿದ್ದಾಗ ಎದುರಾದ ಜವರಾಯ

02/02/2023, 21:57

ಕಣ್ಣೂರು(reporterkarnataka.com): ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿದ ಪರಿಣಾಮ ತುಂಬು ಗರ್ಭಿಣಿ ಪತ್ನಿ ಹಾಗೂ ಪತಿ ಜೀವಂತ ದಹಿಸಿದ ಹೃದಯವಿದ್ರಾವಕ ಘಟನೆಯ ನೆರೆಯ ಕೇರಳದ ಕಣ್ಣೂರು ಸಾಕ್ಷಿಯಾಯಿತು.

ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ಕಾರು ಹೊತ್ತಿ ಉರಿದು ಗರ್ಭಿಣಿ ಹಾಗೂ ಆಕೆ ಪತಿ ಸಜೀವ ದಹನವಾಗಿದ್ದಾರೆ. ಗರ್ಭಿಣಿ ರೀಶಾ (26) ಹಾಗೂ ಆಕೆ ಪತಿ ಪ್ರಿಜಿತ್​(35) ಮೃತರು. ಜಿಲ್ಲಾಸ್ಪತ್ರೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಮಾರುತಿ ಎಕ್ಸ್ ಪ್ರೆಸ್ಸೋ 2020 ರ ಮಾಡೆಲ್ ಆಗಿದ್ದು, 6 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕಾರಿನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದು, ಮಗು ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ದಂಪತಿಗೆ ಕಾರಿನ ಬಾಗಿಲು ತೆಗೆಯಲು ಸಾಧ್ಯವಾಗದೇ ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಯಲ್ಲಿ ಪ್ರಿಜೀತ್​ ಹಾಗೂ ರೀಶಾ ಮೃತಪಟ್ಟಿದ್ದರು ಎನ್ನಲಾಗಿದೆ.

ಘಟನೆ ನಡೆಯುತ್ತಿದ್ದ ವೇಳೆಯಲ್ಲಿ ಅಲ್ಲೇ ಇದ್ದ ಸ್ಥಳೀಯರು ದಂಪತಿಯನ್ನು ರಕ್ಷಿಸಲು ಯತ್ನಿಸಿದರಾದರೂ, ಅದು ಸಾಧ್ಯವಾಗಲಿಲ್ಲ. ಸಜೀವ ದಹನದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಬೆಂಕಿಯ ಒಳಗೆ ಸಿಕ್ಕು ಹಾಕಿಕೊಂಡು ದಂಪತಿ ಕಿರುಚಾಡುವ ದೃಶ್ಯಗಳು ಕರಳು ಹಿಂಡುವಂತಿದೆ. ಅನೇಕರು ಕಾರಿನ ಸಮೀಪ ಬಂದರಾದರೂ ಕಾರು ಸ್ಫೋಟಗೊಳ್ಳುವ ಅಪಾಯದಿಂದ ಯಾರೂ ಕೂಡ ಗಾಜು ಒಡೆಯಲು ಹೆದರಿಕೊಂಡಿದ್ದರು.

ಬೆಂಕಿ ಹೊತ್ತಿದ್ದ ವೇಳೆ ಎಲ್ಲರೂ ಅಸಹಾಯಕರಾಗಿದ್ದೆವು. ಕಾರಿನ ಮುಂಭಾಗವು ನೋಡ ನೋಡುತ್ತಿದ್ದಂತೆಯೇ ಬೆಂಕಿಗೆ ಆಹುತಿಯಾಗಿತ್ತು. ಕಾರಿನ ಇಂಧನ​ ಟ್ಯಾಂಕ್​ ಯಾವಾಗ ಬೇಕಿದ್ದರೂ ಸ್ಫೋಟಗೊಳ್ಳಬಹುದಿತ್ತು. ಹೀಗಾಗಿ ನಮಗೆ ದಂಪತಿ ಉಳಿಸಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.
ಕಾರಿನಲ್ಲಿದ್ದ ಉಳಿದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕಾರು ಬೆಂಕಿಗೆ ಆಹುತಿಯಾದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಕಣ್ಣೂರು ನಗರ ಪೊಲೀಸ್​ ಕಮಿಷನರ್​​ ಅಜಿತ್​ ಕುಮಾರ್​ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು