3:39 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

Good News : ದಕ್ಷಿಣ ಕನ್ನಡ : ಇಂದು ಕೊರೊನಾ ಪಾಸಿಟಿವ್‌ಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು.!

13/05/2021, 20:04

ಮಂಗಳೂರು (Reporter Karnataka News)

ಕೊರೊನಾ ಸೋಂಕಿನ ವ್ಯಾಪಕ ಹರಡುವಿಕೆ ಹಾಗೂ ಆಮ್ಲಜನಕ, ಬೆಡ್ ಕೊರತೆಯ ಕಣ್ಣೀರಿಳಿಸುವ ಸುದ್ದಿಗಳ ನಡುವೆ ಇವತ್ತು ದಕ್ಷಿಣ ಕನ್ನಡ ಜಿಲ್ಲೆಗೆ ತುಸು ಸಮಾಧಾನ ತರುವ ಸುದ್ದಿ ಸಿಕ್ಕಿದೆ.
ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಪಾಸಿಟಿವ್ ಸಂಖ್ಯೆ ತುಸು ಇಳಿಮುಖಗೊಂಡಿತ್ತು ಗುಣಮುಖರಾದವರ ಸಂಖ್ಯೆ ಪಾಸಿಟಿವ್ ಕೇಸ್‌ಗಳಿಗಿಂತ ಹೆಚ್ಚಾಗಿರುವುದು ಸಮಾಧಾನಕರವಾಗಿದೆ.

ಜಿಲ್ಲೆಯಲ್ಲಿ ಇಂದು
812 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಇಂದು 911 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ಆದರೆ ಈ ದಿನ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಐವರು ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 802ಕ್ಕೆ ಏರಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 60,355 ಪಾಸಿಟಿವ್ ಕೇಸ್‌ಗಳು ದಾಖಲಾಗಿದ್ದು 12,569 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು