ಇತ್ತೀಚಿನ ಸುದ್ದಿ
ಉಪ್ಪೂರು: ಎದೆನೋವು ಉಲ್ಬಣಿಸಿ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು
04/02/2023, 10:32

ಉಡುಪಿ(reporterkarnataka.com): ಎದೆನೋವು ಉಲ್ಬಣಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಡೆದಿದೆ.
ಉಪ್ಪೂರು ಗ್ರಾಮದ ಪೀಟರ್ ಡಿಸೋಜ(62) ಮೃತದುರ್ದೈವಿ. ಇವರಿಗೆ ವಿಪರೀತ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈಧ್ಯರು ಪೀಟರ್ ಡಿಸೋಜ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.