3:06 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ

ಇತ್ತೀಚಿನ ಸುದ್ದಿ

ಮಂಗಳೂರು: 46ನೇ ಕಂಟೋನ್ಮೆಂಟ್‌ ವಾರ್ಡಿನ ರಾಜ ಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

04/02/2023, 12:26

ಮಂಗಳೂರು(reporterkarnataka.com): ಪಾಲಿಕೆಯ 46ನೇ ಕಂಟೋನ್ಮೆಂಟ್‌ ವಾರ್ಡಿನ ವೈದ್ಯನಾಥ ನಗರದ ರಾಜ ಕಾಲುವೆಗೆ ಸುಭದ್ರ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್‌ ಶಿಲಾನ್ಯಾಸ ನೆರವೇರಿಸಿದರು.

ಕುಸಿದಿರುವ ತಡೆಗೋಡೆಯ ಮರು ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಯೋಜನೆಯನ್ನು ತಯಾರಿಸಿದೆ. ಅದರಂತೆ ಇದೀಗ ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗಿದೆ ಎಂದು ಶಾಸಕರು ತಿಳಿಸಿದರು.

ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ನಗರದ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ 100 ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಮಳೆಗಾಲದಲ್ಲಿ ನಗರದಲ್ಲಿ ಉಂಟಾಗುವ ನೆರೆ ಹಾವಳಿಯನ್ನು ನಿವಾರಿಸಲು ರಾಜ ಕಾಲುವೆಗಳಿಗೆ ತಡೆಗೋಡೆ ನಿರ್ಮಾಣ, ಕಾಲುವೆಗಳ ಹೂಳೆತ್ತುವಿಕೆ, ಅಗಲಗೊಳಿಸುವಿಕೆ ಸೇರಿದಂತೆ ವಿವಿಧ ಯೋಜನೆಗಳಿಗೆ ಈ ಅನುದಾನವನ್ನು ಬಳಸಲಾಗುವುದು ಎಂದು ಹೇಳಿದರು.
ಮಳೆ ಬಂದಾಗ ನಗರದ ನಿವಾಸಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮಳೆ ನೀರಿನ ಚರಂಡಿ ಮತ್ತು ಕಾಲುವೆಗಳ ಹೂಳೆತ್ತುವಿಕೆ, ತಡೆಗೋಡೆ ನಿರ್ಮಾನ ಸೇರಿದಂತೆ ವಿವಿಧ ಯೋಜನೆಗಳ ರೂಪುರೇಷೆಗಳನ್ನು ತಯಾರಿಸಲಾಗಿದೆ ಎಂದು ಶಾಸಕ ಕಾಮತ್‌ ನುಡಿದರು.
ಪ್ರಸ್ತುತ ಈ ರಾಜ ಕಾಲುವೆಯ ತಡೆಗೋಡೆಯನ್ನು ಸ್ಥಳೀಯರ ಬೇಡಿಕೆ ಮತ್ತು ಮಾಜಿ ಮೇಯರ್‌ ದಿವಾಕರ್‌ ಅವರ ಮನವಿಯಂತೆ 10 ಅಡಿ ಅಗಲಕ್ಕೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಅಕ್ಕಪಕ್ಕದ 40 ಸೆಂಟ್ಸ್‌ ಜಾಗವನ್ನು ಸಹ ಬಿಟ್ಟುಕೊಡುವಂತೆ ಸ್ಥಳೀಯರ ಮನವೊಲಿಸಲಾಗಿದೆ. ಇಲ್ಲಿನ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದ ಜನರಿಗೆ ಮಳೆ ನೀರಿನಿಂದ ಸಮಸ್ಯೆಯಾಗದು ಎಂದು ಶಾಸಕರು ತಿಳಿಸಿದರು.

ಮಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧವಾಗಿದ್ದು, ಮಹಾನಗರಪಾಲಿಕೆಯ ಎಲ್ಲ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಮಾಜಿ ಮೇಯರ್ ಹಾಗೂ ಸ್ಥಳೀಯ ಕಾರ್ಪೋರೇಟರ್ ದಿವಾಕರ್ ಪಾಂಡೇಶ್ವರ, ಮುಖಂಡರಾದ ಲಲ್ಲೇಶ್ ಅತ್ತಾವರ, ನಿತಿನ್ ಕಾಮತ್, ಅಮರ್ ಪಾಂಡೇಶ್ವರ, ಉಮೇಶ್ ರಾವ್, ಮಾಲತಿ ಶೆಟ್ಟಿ, ಸೌಭಾಗ್ಯ, ಕೀರ್ತಿ ಅತ್ತಾವರ, ಚಂದ್ರಹಾಸ್, ರಿತೇಶ್, ಹಿತೇಶ್ ಅತ್ತಾವರ, ಸ್ಥಳೀಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು