11:00 PM Saturday10 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಯೂಟ್ಯೂಬರ್ ಬಂಧನ; ಜಾಮೀನು

04/02/2023, 17:11

ಮಂಗಳೂರು(reporterkarnataka.com) : ಮಂಗಳೂರು- ಮುಂಬೈ ರಾಷ್ಟ್ರೀಯ ಹೆದ್ದಾರಿಯ ಪಡುಪಣಂಬೂರು ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾರು ಚಲಾಯಿಸುತ್ತಿದ್ದ ಪ್ರಸಿದ್ಧ ಯೂಟ್ಯೂಬರ್ ಅರ್ಪಿತ್ ಬಂಧನವಾಗಿದ್ದು, ಜಾಮೀನು ಕೂಡ ದೊರೆತಿದೆ.

ಕಳೆದ ಮಂಗಳವಾರ ಮುಲ್ಕಿ ಸಮೀಪ ನಡೆದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದ್ದು, ಕರಾವಳಿಯ ಖ್ಯಾತ ಯೂಟ್ಯೂಬರ್ ಅರ್ಪಿತ್ ಎಂಬವರನ್ನು
ಪೋಲಿಸರು ಬಂಧಿಸಿದ್ದರು.
ಬಂಧಿತ ಆರೋಪಿ ಯೂಟ್ಯೂಬರ್ ಆಗಿದ್ದು,
ಹಳೆಯಂಗಡಿ ಸಮೀಪದ ಇಂದ್ರನಗರ ನಿವಾಸಿ.
ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರು ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದರು.
ಮಧ್ಯ ಪ್ರದೇಶದ ಇಂದೋರ್ ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯ ಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು.‌ಈ ವೇಳೆ ಹೆದ್ದಾರಿಯಲ್ಲಿ ಉಡುಪು ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತ ರಭಸಕ್ಕೆ ಬಬುಲು ಎಂಬಾತ ಸ್ಥಳದಲ್ಲಿ ಮೃತಪಟ್ಟರೆ, ಇನ್ನೋರ್ವ ಅಚಲ್ ಸಿಂಗ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇನ್ನೋರ್ವ ಗಾಯಾಳು ಅನಿಶ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಮೂವರಿಗೆ ಡಿಕ್ಕಿ ಹೊಡೆದ ಕಾರು ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು